Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ - ದಾವಣಗೆರೆ ಉಪ ಚುನಾವಣೆ : ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು 

Advertisement

ಬಾಗಲಕೋಟೆ / ದಾವಣಗೆರೆ : ತೀವ್ರ ಪೈಪೋಟಿಯಲ್ಲಿ ಕರ್ನಾಟಕದ ಎರಡು ಕ್ಷೇತ್ರಗಳಾದ ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ ಫಲಿತಾಂಶ ಇದೀಗ ಹೊರಬಿದ್ದಿದ್ದು, ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂದು ತಿಳಿದುಬಂದಿದೆ.

ಬಾಗಲಕೋಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಅವರು ಸ್ಪರ್ಧಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ಅವರು ಸ್ಪರ್ಧೆ ಮಾಡಿದ್ದರು.

ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಾಮನೂರು ಶಿವಶಂಕರಪ್ಪ ಅವರ ಮೊಮ್ಮಗ ಸಮರ್ಥ ಶಾಮನೂರು ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಶ್ರೀನಿವಾಸ್ ದಾಸಕರಿಯಪ್ಪ ಅವರು ಸ್ಪರ್ಧೆ ಮಾಡಿದ್ದರು.

21ನೇ ಸುತ್ತಿನಲ್ಲಿ ಉಮೇಶ್ ಮೇಟಿ ಅವರಿಗೆ 21,866 ಮತಗಳಿಂದ ಗೆಲುವು ಸಾಧಿಸಿದ್ದಾರೆ. ಉಮೇಶ್ ಮೇಟಿ ಅವರಿಗೆ ಒಟ್ಟು 97,841ಮತಗಳು ಬಂದಿದ್ದು ಇನ್ನು ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರಿಗೆ 76,075 ಮತಗಳು ಬಂದಿವೆ.

ಅದೇ ರೀತಿಯಾಗಿ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಸಮರ್ಥ ಶಾಮನೂರು ಅವರು ಭರ್ಜರಿ ಗೆಲುವು ಕಂಡಿದ್ದಾರೆ. 6430 ಮತಗಳಿಂದ ಸಮರ್ಥ ಶಾಮನವರು ಅವರು ಗೆಲುವು ಸಾಧಿಸಿದ್ದಾರೆ. ಇನ್ನು ಬಿಜೆಪಿ ಅಭ್ಯರ್ಥಿ ಶ್ರೀನಿವಾಸ ದಾಸ ಕರಿಯಪ್ಪ ಅವರು ಸೋತಿದ್ದಾರೆ. 

ಇನ್ನು ಮೂರು EVM ಮಷೀನ್ ನಲ್ಲಿ ತಾಂತ್ರಿಕ ದೋಷ ಕಂಡು ಬಂದ ಹಿನ್ನೆಲೆಯಲ್ಲಿ ಮತ ಎಣಿಕೆಯಲ್ಲಿ ವಿಳಂಬವಾಗುತ್ತಿದ್ದು ಈಗಾಗಲೇ ಸಮರ್ಥ ಶಾಮನೂರು ಬೆಂಬಲಿಗರು ಹಾಗೂ ಕಾರ್ಯಕರ್ತರು ಸಂಭ್ರಮಾಚರಣೆ ಮಾಡುತ್ತಿದ್ದಾರೆ. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಧಿಕೃತ ಘೋಷಣೆ ಒಂದೇ ಬಾಕಿ ಇದೆ

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾಳದ ಗೆಲುವಲ್ಲ ಭಾರತದ ಗೆಲುವು : ಗುರುನಾಥ ರಾಜಗೀರಾಆಸಿಡ್ ದಾಳಿಗೆ ಸಂತ್ರಸ್ತರಿಗೂ ವಿಕಲಚೇತನ ಮಾನ್ಯತೆ : ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಬಾಗಲಕೋಟೆ - ದಾವಣಗೆರೆ ಉಪ ಚುನಾವಣೆ : ಎರಡು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಪ್ರಕಟ : ಮೂರು ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ನಾವು ಸ್ವತಂತ್ರ ಸರ್ಕಾರ ರಚನೆ ಮಾಡುತ್ತೇವೆ : ಟಿವಿಕೆ ಪಕ್ಷ ಘೋಷಣೆ ಗಾರಲದಿನ್ನಿ ಗ್ರಾಮದಲ್ಲಿ   ಕೆರೆ ಬಸವೇಶ್ವರ ದೇವಸ್ಥಾನ ಧ್ವಜಸ್ತಂಭ ಸ್ಥಾಪನೆಉಚಿತ ಸಾಮೂಹಿಕ ವಿವಾಹ ಇದು ಒಂದು ಐತಿಹಾಸಿಕ ಕಾರ್ಯಕ್ರಮ ಡಿಕೆಶಿಒಳಚಂಡಿ ಕಾಮಗಾರಿಗೆ ಭೂಮಿ ಪೂಜೆ : ಶಾಸಕ ಹಂಪನಗೌಡ ಬಾದರ್ಲಿಆರ್ ಪಿ ಎಲ್ ಫೈನಲ್ ಪಂದ್ಯ KKR ಮಡಲಿಗೆ,  ಮತ್ತು ಅತೀ ಶೀಘ್ರದಲ್ಲೇ ಕ್ರೀಡಾಂಗಣ ನಿರ್ಮಾಣ ಶಾಸಕ ಅಶೋಕ್ ಪಟ್ಟಣ  ಭರವಸೆ.ಸೋಶಿಯಲ್ ಮೀಡಿಯಾ ವ್ಯಸನ : ಮಗಳನ್ನು ಕಾಯಲು ನಾಲ್ವರು ಬೌನ್ಸರ್‌ಗಳ ನೇಮಕ