ಕಲಾದಗಿ : ಬಾಗಲಕೋಟೆ ಜಿಲ್ಲೆಗೆ ಮೊದಲು ಜನರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು, ನಂತರ ಕೃಷಿ ಜಮೀನುಗಳಿಗೆ ನೀರು ಪೂರೈಕೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಅಧಿಕಾರಿಗಳಿಗೆ ಖಡಕ್ ಸೂಚನೆ.
ಬಾಗಲಕೋಟೆ ಜಿಲ್ಲಾ ಉಸ್ತುವಾರಿಯಾದ ಬಳಿಕ ಮೊದಲ ಬಾರಿಗೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಮುಂಗಾರು ಮಳೆ ಅವಧಿಯ ಪೂರ್ವ ಸಿದ್ಧತೆ ಹಾಗೂ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ.
ರೈತರ ಬಗ್ಗೆ ನನಗೂ ಕಾಳಜಿ ಇದೆ, ಆದರೆ ಮೊದಲ ಆದ್ಯತೆ ಸಾರ್ವಜನಿಕರಿಗೆ ಕುಡಿಯುವ ನೀರು ಒದಗಿಸುವುದಾಗಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಬೇಕು.
ನಂತರ ರೈತರಿಗೆ ಕೃಷಿ ಚಟುವಟಿಕೆಗೆ ಜಮೀನುಗಳಿಗೆ ನೀರು ತೊಂದರೆ ಆಗದಂತೆ ಪೂರೈಕೆ ಮಾಡುವ ಬಗ್ಗೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದರು.
ಬಾಗಲಕೋಟೆ ಜಿಲ್ಲೆಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಲಿದೆ. ಸರ್ಕಾರಿ ಹಾಗೂ ಖಾಸಗಿ ಬೋರ್ ವೆಲ್ ಗಳ ಬಳಕೆ ಮತ್ತು ಕುಡಿಯುವ ನೀರಿನ ಘಟಕಗಳ ದುರಸ್ತಿ ಕಾರ್ಯ ಅಧಿಕಾರಿಗಳಿಗೆ ನೇರ ಜವಾಬ್ದಾರಿ ನೀಡಿದೆ ಹಾಗೂ ಹಿಪ್ಪರಗಿ ಬ್ಯಾರೇಜನ್ನು 22 ಗೇಟುಗಳನ್ನು ಬದಲಾವಣೆಗೆ ಸುಮಾರು 45 ರಿಂದ 50 ಕೋಟಿ ವೆಚ್ಚದ ಪ್ರಸ್ತಾವನೆ ಸಲ್ಲಿಸಲಾಗುತ್ತದೆ.
ಜಿಲ್ಲೆಗೆ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು ಮತ್ತು ನೀರಿನ ಕೊರತೆ ಉಂಟಾಗದಂತೆ ಸಂಬಂಧ ಪಟ್ಟ ಅಧಿಕಾರಿಗಳು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕತ್ತು ಮಾಡಿದರು.
ಇದೇ ಸಂದರ್ಭದಲ್ಲಿ ಮಾಜಿ ಜಿಲ್ಲಾ ಉಸ್ತುವಾರಿ ಸಚಿವ ಆರ್ ಬಿ ತಿಮ್ಮಾಪುರ, ಬೀಳಗಿ ಶಾಸಕ ಜೆ ಟಿ ಪಾಟೀಲ, ಸಂಬಂಧ ಪಟ್ಟ ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಬಸವರಾಜ ಪೂಜಾರಿ


