Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಜಾಮೀನು ಮಂಜೂರು 

Advertisement

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಕಾಂಗ್ರೆಸ್ ನಾಯಕ ಹಾಗೂ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಕರ್ನಾಟಕ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ವಿನಯ್ ಕುಲಕರ್ಣಿ ಅವರು ಸಲ್ಲಿಸಿದ್ದ ಜಾಮೀನು ಹಾಗೂ ಶಿಕ್ಷೆಗೆ ತಡೆ ಕೋರಿದ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಅವರ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿ ತೀರ್ಪು ಪ್ರಕಟಿಸಿದೆ.ಇದರಿಂದಾಗಿ ಜೈಲುವಾಸ ಅನುಭವಿಸುತ್ತಿದ್ದ ವಿನಯ್ ಕುಲಕರ್ಣಿ ಅವರಿಗೆ ದೊಡ್ಡ ನೆಮ್ಮದಿ ಸಿಕ್ಕಂತಾಗಿದೆ.

ಹೈಕೋರ್ಟ್ ತೀರ್ಪಿನನ್ವಯ, ವಿನಯ್ ಕುಲಕರ್ಣಿ ಸೇರಿದಂತೆ ಒಟ್ಟು 10 ಆರೋಪಿಗಳಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ. ಪ್ರಕರಣದ ಮತ್ತೊಬ್ಬ ಪ್ರಮುಖ ಆರೋಪಿ ಚನ್ನಕೇಶವ ಟಿಂಗರಿಕರ್ ಅವರಿಗೂ ಜಾಮೀನು ಲಭಿಸಿದೆ. 

ಜಾಮೀನು ಮಂಜೂರು ಮಾಡುವ ವೇಳೆ ಹೈಕೋರ್ಟ್ ಕೆಲವು ಕಠಿಣ ಷರತ್ತುಗಳನ್ನು ವಿಧಿಸಿದ್ದು, ಅರ್ಜಿದಾರರು 5 ಲಕ್ಷ ರೂಪಾಯಿ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಇಬ್ಬರ ಶೂರಿಟಿ ಒದಗಿಸಬೇಕು ಎಂದು ಸೂಚಿಸಿದೆ. ಜೊತೆಗೆ, ನ್ಯಾಯಾಲಯದ ಪೂರ್ವಾನುಮತಿ ಇಲ್ಲದೆ ದೇಶ ತೊರೆಯುವಂತಿಲ್ಲ ಎಂದು ಸ್ಪಷ್ಟಪಡಿಸಿದೆ.

ಅಷ್ಟೇ ಅಲ್ಲದೆ, ವಿನಯ್ ಕುಲಕರ್ಣಿ ಅವರನ್ನು 'ದೋಷಿ' ಎಂದು ತೀರ್ಪು ನೀಡಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೂ ಹೈಕೋರ್ಟ್ ಸದ್ಯ ತಡೆಯಾಜ್ಞೆ ನೀಡಿದೆ.

ಶಿಕ್ಷೆ ಹಾಗೂ ದೋಷಮುಕ್ತತೆಯ ಆದೇಶಕ್ಕೆ ತಡೆ ಬಿದ್ದಿರುವುದರಿಂದ, ಜನಪ್ರತಿನಿಧಿ ಕಾಯ್ದೆಯಡಿ ಅಪಾಯದಲ್ಲಿದ್ದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನದ ರಾಜಕೀಯ ಭವಿಷ್ಯಕ್ಕೆ ಇದೀಗ ಮರುಜೀವ ಬಂದಂತಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ತಿದಾಳೆಂದು ಆಸ್ಪತ್ರೆಯಿಂದ ಮನೆಗೆ ತರುವಾಗ ರಸ್ತೆ ಮಧ್ಯೆ ಎದ್ದು ಕುಳಿತ ಮಹಿಳೆವಿನಯ್ ಕುಲಕರ್ಣಿ ಸೇರಿದಂತೆ 10 ಆರೋಪಿಗಳಿಗೆ ಜಾಮೀನು ಮಂಜೂರು ರಾಜ್ಯ ಹೆದ್ದಾರಿಯ ರೈತರ ಜಮೀನಿಗೆ ನಿಗದಿತ ರೇಟ್ ಫಿಕ್ಸ್ ಹಸಿರು ಸೇನೆ ರೈತರ ಚಿಕ್ಕೋಡಿಯಲ್ಲಿ ಬೃಹತ್ ಹೋರಾಟಮಾನವ ಕಳ್ಳ ಸಾಗಾಣಿಕೆ ವಿರೋಧಿ ದಿನಾಚರಣೆಫುಡ್ ಪಾಯಿಜನ್ ಅಲ್ಪಸಂಖ್ಯಾತರ ಮುರಾರ್ಜಿ ವಸತಿ ನಿಲಯ ವಿದ್ಯಾರ್ಥಿನಿಯರು ಅಸ್ತವ್ಯಸ್ತಹುಮನಾಬಾದನಲ್ಲಿ ಇಂದು ಪತ್ರಿಕಾ ದಿನಾಚರಣೆ ಶಿಕ್ಷೆಯಿಲ್ಲದೆ ಶಿಕ್ಷಣ ಸಾಧ್ಯವಿಲ್ಲ : ಧರ್ಮವ್ರತಾನಂದಜಿ ಮಹಾರಾಜ್ ಪೇಪರ್ ಲೀಕ್ ಕೋರರನ್ನು ಬಿಡುವ ಮಾತೇ ಇಲ್ಲ : ಮೋದಿ ಮತ್ತೊಂದು ವಿಡಿಯೋ 7,000 ವಿದ್ಯಾರ್ಥಿಗಳಲ್ಲಿ ಎಚ್‌ಐವಿ ಪಾಸಿಟಿವ್ ಸುದ್ದಿ ತಪ್ಪು ಹಾಗೂ ಆಧಾರರಹಿತ : ಆರೋಗ್ಯ ಇಲಾಖೆ ಮೋದಿ ವಿಷ್ಣುವಿನ ಅವತಾರ ಅವರ ಕಾಲು ತೊಳೆದು ನೀರು ಕುಡಿಯಲು ಸಿದ್ಧ : ಬಾಲಿವುಡ್ ನಟ ಬೆರಿ