LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಕಾರಿನಲ್ಲೇ ಸುಟ್ಟು ಸ್ಥಿತಿಯಲ್ಲಿ ಪತ್ತೆಯಾದ ಬೈಲಹೊಂಗಲ ಮಾಜಿ ಶಾಸಕರ ಪುತ್ರ 

Advertisement
ಧಾರವಾಡ : ಜಿಲ್ಲೆಯ ರಾಮಾಪುರ ಅರಣ್ಯ ವ್ಯಾಪ್ತಿಯ ನಿರ್ಜನ ಪ್ರದೇಶದಲ್ಲಿ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರ ಶವವು ಕಾರಿನಲ್ಲೇ ಸಂಪೂರ್ಣ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಈ ಘಟನೆಯು ಜಿಲ್ಲೆಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಬಲವಾದ ಶಂಕೆ ವ್ಯಕ್ತವಾಗಿದೆ.

ಧಾರವಾಡ ತಾಲೂಕಿನ ರಾಮಾಪುರ ಗ್ರಾಮದ ರೈಲ್ವೆ ಟ್ರ್ಯಾಕ್ ಪಕ್ಕದಲ್ಲಿರುವ ದಟ್ಟ ಅರಣ್ಯ ಪ್ರದೇಶದಲ್ಲಿ ಈ ದಾರುಣ ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹಚ್ಚಲಾಗಿದ್ದು, ಒಳಗಿದ್ದ ರಾಜು ಬೋಳಶೆಟ್ಟಿ ಅವರ ದೇಹ ಸಂಪೂರ್ಣ ಸುಟ್ಟು ಕರಕಲಾಗಿದೆ.

ಗುರುತು ಸಿಗದಷ್ಟು ಸ್ಥಿತಿಯಲ್ಲಿ ದೇಹ ಪತ್ತೆಯಾಗಿದೆ. ಧಾರವಾಡ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನಿರ್ಜನ ಪ್ರದೇಶದಲ್ಲಿ ಕಾರಿಗೆ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಚುರುಕುಗೊಳಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ