Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

29ರಿಂದ 'ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ' : ಪ್ರಕಾಶ್ ರಾಜ್ ರಾಯಭಾರಿ

Advertisement

ಬೆಂಗಳೂರು : ಜ. 29 ರಿಂದ ಫೆ. 6 ರವರೆಗೆ 17ನೇ 'ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ' ನಡೆಯಲಿದೆ. ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ ಆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಮಾಹಿತಿ ನೀಡಿದರು.


17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೂರ್ವ ಭಾವಿ ಸಭೆಯ ಬಳಿಕ ನಡೆದ ಪತ್ರಿಕಾಗೋಷ್ಠಿಯಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಜನವರಿ 29ರಿಂದ ಫೆಬ್ರವರಿ 6ರ ವರೆಗೆ ನಡೆಯಲಿದೆ. ಹಿರಿಯ ಚಲನಚಿತ್ರ ಕಲಾವಿದರು, ನಿರ್ದೇಶಕರು ನಿರ್ಮಾಪಕರು ಆದ ಪ್ರಕಾಶ್ ರಾಜ್ ಅವರನ್ನು 17ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ರಾಯಭಾರಿಯಾಗಿ  ಆಗಿ ನೇಮಿಸಲಾಗಿದೆ

*ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನೆ ವಿಧಾನಸೌಧದ ಮುಂಭಾಗದಲ್ಲಿ ಭವ್ಯ ಮೆಟ್ಟಿಲುಗಳ ಮೇಲೆ ನಡೆಯಲಿದೆ.

ಈ ಬಾರಿಯ ಚಲನಚಿತ್ರೋತ್ಸವದಲ್ಲಿ ಮಹಿಳಾ ಸಬಲೀಕರಣ ಕುರಿತಾದ ಥೀಮ್ ಇರಲಿದೆ. ರಾಜಾಜಿನಗರದ ಲುಲುಮಾಲ್ನಲ್ಲಿರುವ ಸಿನಿ ಪೊಲಿಸ್ನ 11 ಸ್ಕ್ರೀನ್ಗಳಲ್ಲಿ ಚಿತ್ರೋತ್ಸವದ ಚಲನಚಿತ್ರಗಳ ಪ್ರದರ್ಶನ ನಡೆಯಲಿದೆ.

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಏಷಿಯನ್, ಭಾರತೀಯ ಮತ್ತು ಕನ್ನಡ ಸಿನಿಮಾ ಸ್ಪರ್ಧಾತ್ಮಕ ವಿಭಾಗಗಳಿಗೆ ಚಲನಚಿತ್ರಗಳ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಇದಕ್ಕೆ ಉತ್ತಮ ಸ್ಪಂದನೆ ದೊರಕಿದೆ. ಈ ಮೂರು ಸ್ಪರ್ಧಾ ವಿಭಾಗಗಳಿಗೆ ಇದುವರೆಗೆ 110ಕ್ಕೂ ಹೆಚ್ಚು ಚಲನಚಿತ್ರಗಳು ಸಲ್ಲಿಕೆಯಾಗಿವೆ.

ಚಲನಚಿತ್ರಗಳ ಸ್ಪರ್ಧಾತ್ಮಕ ವಿಭಾಗಗಳ ಅರ್ಜಿ ಸಲ್ಲಿಕೆಗೆ ಡಿಸೆಂಬರ್ 31, 2025 ಕಡೆಯ ದಿನಾಂಕವಾಗಿರುತ್ತದೆ. 17ನೇ ಅಂತರ ರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ರಾಜಾಜಿನಗರದ ಲುಲು ಮಾಲ್, ಜೊತೆಗೆ ಡಾ. ರಾಜ್ ಕುಮಾರ್ ಭವನ, ಕಲಾವಿದರ ಸಂಘ, ಚಾಮರಾಜಪೇಟೆ ಹಾಗೂ ಬನಶಂಕರಿಯಲ್ಲಿರುವ ಸುಚಿತ್ರ ಫಿಲಂ ಸೊಸೈಟಿ ಚಿತ್ರಮಂದಿರಗಳಲ್ಲೂ ಚಲನಚಿತ್ರಗಳ ಪ್ರದರ್ಶನವಿರಲಿದೆ.

ಕನ್ನಡ ಮತ್ತು ಭಾರತೀಯ ಚಿತ್ರಗಳು ಸೇರಿದಂತೆ ಒಟ್ಟಾರೆ 60ಕ್ಕೂ ಹೆಚ್ಚು ದೇಶಗಳ 200 ಚಲನಚಿತ್ರಗಳ, 400ಕ್ಕೂ ಹೆಚ್ಚು ಪ್ರದರ್ಶನಗಳಿರಲಿವೆ.

ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಪಾಲ್ಗೊಂಡು ವಿವಿಧ ಪ್ರಶಸ್ತಿಗಳನ್ನು ಪಡೆದ ಮತ್ತು ಜನಮನ್ನಣೆಗಳಿಸಿದ ದೇಶ-ವಿದೇಶದ ಅತ್ಯುತ್ತಮ ಚಲನಚಿತ್ರಗಳು 17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತಿವೆ.

ಕಾನ್ಸ್ (ಫ್ರಾನ್ಸ್), ಬರ್ಲಿನ್ (ಜರ್ಮನಿ, ವೆನಿಸ್ (ಇಟಲಿ), ಕಾರ್ಲೋವಿ ವೇರಿ (ಜೆಕ್ ರಿಪಬ್ಲಿಕ್, ಲೊಕಾರ್ನೂ (ಸಿಟ್ಟರ್ಲೆಂಡ್), ರಾಟರ್ಡ್ಯಾಮ್ (ನೆದರ್ ಲ್ಯಾಂಡ್), ಬೂಸಾನ್ (ದಕ್ಷಿಣ ಕೂರಿಯಾ), ಟೊರಂಟೋ (ಕೆನಡಾ) ದೇಶಗಳ ಚಿತ್ರೋತ್ಸವದಲ್ಲಿ ಭಾಗವಹಿಸಿ ಪ್ರಶಸ್ತಿ, ಮೆಚ್ಚುಗೆ ಪಡೆದ ಚಲನಚಿತ್ರಗಳು ಬೆಂಗಳೂರು ಚಿತ್ರೋತ್ಸವದಲ್ಲಿ ಒಂದೇ ಕಡೆ ಸಿನಿಮಾ ಪ್ರಿಯರಿಗೆ ವೀಕ್ಷಿಸಲು ದೊರೆಯಲಿವೆ.

ಜೊತೆಗೆ ಈ ಬಾರಿಯ ಆಸ್ಕರ್ ಪ್ರಶಸ್ತಿಗೆ ಶಾರ್ಟ್ ಲಿಸ್ಟ್ ಆಗಿರುವ ವಿವಿಧ ದೇಶದ ಅತ್ಯುತ್ತಮ ಚಲನಚಿತ್ರಗಳು ಸಹ ನಮ್ಮ ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿವೆ.

ಪೋಲಿಷ್ ಕಲ್ಪರಲ್ ಸೆಂಟರ್, ನವದೆಹಲಿ, ಗೋಥೆ ಇನ್ಸಿಟ್ಯೂಟ್ – ಮ್ಯಾಕ್ಸ್ ಮುಲ್ಲರ್ ಭವನ, ಬೆಂಗಳೂರು, ಅಲಿಯಾನ್ಸ್ ಫ್ರಾಂಸೇ – ಫ್ರೆಂಚ್ ಇನ್ಸಿಟ್ಯೂಟ್ ಹಾಗೂ ರಾಯಲ್ ಥೈಲ್ಯಾಂಡ್ ಕಾನ್ಸುಲೇಟ್ನವರು ಅವರ ದೇಶಗಳ ಅತ್ಯುತ್ತಮ ಚಲನಚಿತ್ರಗಳನ್ನು ಚಿತ್ರೋತ್ಸವದಲ್ಲಿ ಪ್ರದರ್ಶನಕ್ಕೆ ನೀಡುತ್ತಿದ್ದಾರೆ.

ಹಾಗೆಯೇ ಪೋಲಿಷ್ ಕಲ್ಬರಲ್ ಸೆಂಟರ್ ಸಹಯೋಗದಲ್ಲಿ ಪೊಲೆಂಡ್ನ ಖ್ಯಾತ ನಿರ್ದೇಶಕರಾದ ಅಂದ್ರೆ ವಾಜ್ಞಾ ಅವರ ಶತಮಾನೋತ್ಸವ ಸ್ಮರಣಾರ್ಥವಾಗಿ ಅವರ ಆಯ್ದ ಚಲನಚಿತ್ರಗಳ ವಿಶೇಷ ಪುನರಾವಲೋಕನ (Retrospective), ಈ ಬಾರಿ ಚಿತ್ರೋತ್ಸವದಲ್ಲಿ ಆಯೋಜಿಸಲಾಗಿದೆ.

ಇದರೊಂದಿಗೆ ಅಲಿಯಾನ್ಸ್ ಫ್ರಾಂಸೇ ಬೆಂಗಳೂರು ಹಾಗೂ ಫ್ರೆಂಚ್ ಇನ್ಸಿಟ್ಯೂಟ್ ಇನ್ ಇಂಡಿಯಾ ಸಹಯೋಗದಲ್ಲಿ ಆಫ್ರಿಕಾ ಸಿನಿಮಾಗಳ ಇತಿಹಾಸವನ್ನು ದಾಖಲಿಸುವ ವಿಶೇಷ ಚಲನಚಿತ್ರಗಳ ಸರಣಿಯನ್ನೂ ಈ ವರ್ಷದ ಚಿತ್ರೋತ್ಸವದಲ್ಲಿ ಪ್ರದರ್ಶಿಸಲಾಗುತ್ತಿದೆ.

ಈ ಬಾರಿ ಚಿತ್ರೋತ್ಸವದ ಫಿಲಂ ಅಕಾಡೆಮಿಕ್ ಕಾರ್ಯಕ್ರಮಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿತ ಪ್ರತಿನಿಧಿಗಳು ಭಾಗವಹಿಸಲು ಅನುಕೂಲವಾಗುವಂತೆ ಚಿತ್ರೋತ್ಸವದ ಪ್ರಧಾನ ಕೇಂದ್ರದಲ್ಲಿ ವಿಶೇಷ ವೇದಿಕೆ ಇರಲಿದೆ.

ಇದೇ ವೇದಿಕೆಯ ಆವರಣದಲ್ಲಿ 91 ವರ್ಷಗಳ ವರ್ಣ ರಂಜಿತ, ಸ್ಮರಣೀಯ ಸಿನಿಮಾ ಸಂಸ್ಕೃತಿಯ ಇತಿಹಾಸವಿರುವ ಕನ್ನಡ ಚಿತ್ರರಂಗದ ಮೈಲಿಗಲ್ಲುಗಳನ್ನು ಬಿಂಬಿಸುವ ವೈವಿಧ್ಯಮಯ ಛಾಯಾಚಿತ್ರ ಪ್ರದರ್ಶನವನ್ನು ಸಹ ಏರ್ಪಡಿಸಲಾಗುತ್ತದೆ.

ಅನುದಾನ 2025-26 ನೇರ ಸಾಲಿನ 17ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಏರ್ಪಡಿಸಲು ರೂ.7 ಕೋಟಿ ರೂಪಾಯಿಗಳ ಅಗತ್ಯವಿರುವ ಅನುದಾನ ಒದಗಿಸಲಾಗಿದೆ. ಸಮಾರೋಪ ಸಮಾರಂಭ ಅತ್ಯುತ್ತಮ ಚಲನಚಿತ್ರಗಳಿಗೆ ಪ್ರಶಸ್ತಿ, ಜೀವಮಾನ ಸಾಧನೆ ಪ್ರಶಸ್ತಿ ನೀಡಲಾಗುವುದು ಎಂದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ