Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಣ್ಣ ಹಾಕಿಸಿಕೊಳ್ಳಲು ನಿರಾಕರಿಸಿದ್ದಕ್ಕೆ ಯುವಕನ ಉಸಿರುಗಟ್ಟಿಸಿ ಬರ್ಬರ ಹತ್ಯೆ

Advertisement
ಜೈಪುರ:ಹೋಳಿಗೂ ಮುನ್ನ 25 ವರ್ಷದ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತನ್ನ ಮೈಮೇಲೆ ಬಣ್ಣ ಬಳಿಯುವುದನ್ನು ನಿರಾಕರಿಸಿದ್ದಕ್ಕೆ ಯುವಕನನ್ನು ಕೊಲೆ ಮಾಡಿದ ಭಯಾನಕ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ನಡೆದಿದೆ.

25 ವರ್ಷದ ಯುವಕನನ್ನು ಕತ್ತು ಹಿಸುಕಿ ಕೊಲ್ಲಲಾಗಿದೆ. ಹಂಸರಾಜ್ ಕೊಲೆಯಾದ ಯುವಕ. ಹಂಸರಾಜ್ ಬುಧವಾರ ಸಂಜೆ ಸ್ಥಳೀಯ ಗ್ರಂಥಾಲಯಕ್ಕೆ ತೆರಳಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು. ಈ ವೇಳೆ ಬಂದ ರಾಲ್ವಾಸ್ ಗ್ರಾಮದಲ್ಲಿ ಅಶೋಕ್, ಬಬ್ಲು ಮತ್ತು ಕಲುರಾಮ್ ಹಂಸರಾಜ್‌ಗೆ ಬಣ್ಣ ಹಚ್ಚಲು ಮುಂದಾಗಿದ್ದಾರೆ. ಆಗ ಹಂಸರಾಜ್ ಬಣ್ಣ ಹಚ್ಚಲು ನಿರಾಕರಿಸಿದ್ದಾರೆ.

ಹಂಸರಾಜ್ ಬಣ್ಣ ಬಳಿಯಲು ನಿರಾಕರಿಸಿದಾಗ, ಮೂವರು ಆತನನ್ನು ಒದ್ದು ಬೆಲ್ಟ್‌ಗಳಿಂದ ಹೊಡೆದಿದ್ದಾರೆ. ನಂತರ ಅವರಲ್ಲಿ ಒಬ್ಬರು ಆತನನ್ನು ಕತ್ತು ಹಿಸುಕಿ ಕೊಂದಿದ್ದಾನೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ (ಎಎಸ್‌ಪಿ) ದಿನೇಶ್ ಅಗರ್‌ವಾಲ್ ತಿಳಿಸಿದ್ದಾರೆ.

ನಂತರ ಕೋಪಗೊಂಡ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಹಂಸರಾಜ್ ಅವರ ಮೃತದೇಹದೊಂದಿಗೆ ಪ್ರತಿಭಟನೆ ನಡೆಸಿದ್ದಾರೆ. ಗುರುವಾರ ಬೆಳಗಿನ ಜಾವ 1 ಗಂಟೆಯವರೆಗೆ ಈ ಪ್ರದೇಶದಲ್ಲಿ ರಾಷ್ಟ್ರೀಯ ಹೆದ್ದಾರಿಯನ್ನು ತಡೆಹಿಡಿದು ಕುಟುಂಬಸ್ಥರು ಪ್ರತಿಭಟನೆ ಮಾಡಿದ್ದಾರೆ. ಹಂಸರಾಜ್ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರ, ಕುಟುಂಬದ ಒಬ್ಬ ಸದಸ್ಯನಿಗೆ ಸರ್ಕಾರಿ ಕೆಲಸ ಮತ್ತು ಆರೋಪಿ ಮೂವರನ್ನು ತಕ್ಷಣ ಬಂಧಿಸಬೇಕೆಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಪೊಲೀಸರ ಭರವಸೆಯ ನಂತರ ಮೃತದೇಹವನ್ನು ಹೆದ್ದಾರಿಯಿಂದ ತೆಗೆಯಲಾಯಿತು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ