ಬೆಳಗಾವಿ : ನೇಪಾಳದಲ್ಲಿ ಹೋಟೆಲ್ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ.
ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಸದ್ಯ ಲಭ್ಯವಾಗಿರುವ ಮಾಹಿತಿಯಂತೆ, ಸಾಹಿಲ್ ಯುವಕ ಮೊಮೀನ್ ಎಂಬಾತ ಕೆಲ ವರ್ಷಗಳ ಕಾಲ ದುಬೈ ಹಾಗೂ ಥೈಲ್ಯಾಂಡ್‌ನಲ್ಲಿ ಉದ್ಯೋಗ ಮಾಡಿದ್ದು, ಸುಮಾರು 25 ದಿನಗಳ ಹಿಂದೆ ನೇಪಾಳದ ಝಾಪಾ ಜಿಲ್ಲೆಯ ದಮಕದಲ್ಲಿರುವ ಖಾಸಗಿ ಹೋಟೆಲ್‌ನಲ್ಲಿ ಕೆಲಸಕ್ಕೆ ಸೇರಿದ್ದ ಎನ್ನಲಾಗಿದೆ. ಅಲ್ಲಿಯೇ ಸದ್ದಾಂ ಹುಸೇನ್ ಎಂಬ ವ್ಯಕ್ತಿಯೊಂದಿಗೆ ಒಂದೇ ಕೊಠಡಿಯಲ್ಲಿ ಮೊಮಿನ್ ವಾಸವಿದ್ದ ಎನ್ನಲಾಗಿದೆ.
ಘಟನೆಯ ಹಿಂದಿನ ದಿನ ಸಾಹಿಲ್ ಬೆಳಗಾವಿಯಲ್ಲಿದ್ದ ತಮ್ಮ ಸ್ನೇಹಿತನೊಬ್ಬನನ್ನು ಅದೇ ಹೋಟೆಲ್‌ನಲ್ಲಿ ಉದ್ಯೋಗಕ್ಕಾಗಿ ಕರೆಸಿಕೊಂಡಿದ್ದ ಎನ್ನಲಾಗಿದೆ.
ರಾತ್ರಿ ಮೂವರೂ ಒಂದೇ ಕೊಠಡಿಯಲ್ಲಿ ಮಲಗಿದ್ದ ವೇಳೆ ಸಾಹಿಲ್ ಹಾಗೂ ಸದ್ದಾಂ ನಡುವೆ ವಾಗ್ವಾದ ನಡೆದಿತ್ತು. ಸ್ನೇಹಿತ ಮಧ್ಯಸ್ಥಿಕೆ ವಹಿಸಿ ಪರಿಸ್ಥಿತಿಯನ್ನು ಶಾಂತಗೊಳಿಸಿದ್ದ ಎನ್ನಲಾಗಿದೆ.


