LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬಸವ ಮಂಟಪ ಪುಸ್ತಕ ವಿವಾದ: ಲೇಖಕ ರವಿ ಹಂಜ್ ವಿರುದ್ಧ ಕೇಸ್ ದಾಖಲು

Advertisement

ಬೆಂಗಳೂರು: 'ಬಸವ ಮಂಟಪ' ಪುಸ್ತಕದಲ್ಲಿ ಬಸವಣ್ಣನವರಿಗೆ ಅವಮಾನ ಮಾಡಿದ ಆರೋಪ ಕೇಳಿಬಂದಿದ್ದು, ರಾಅಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿದೆ. 

ಬಸವ ಮಂಟಪ ಪುಸ್ತಕದ ಲೇಖಕ ರವಿ ಹಂಜ್ ವಿರುದ್ಧ ಶಾಸಕ ಬಿ.ಆರ್.ಪಾಟೀಲ್ ನೇತೃತ್ವದ ಬಸವಣ್ಣ ಅನುಯಾಯಿಗಳ ನಿಯೋಗ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಗೆ ದೂರು ನೀಡಿದೆ.

ಲೇಖಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಗಿದೆ. ಮತ್ತೊಂದೆಡೆ ಬೆಂಗಳೂರಿನ ಬಸವ ಸಮಿತಿ ಆವರಣದಲ್ಲಿ ಬಸವ ಮಂಟಪ ಪುಸ್ತಕ ಸುಟ್ಟು ಆಕ್ರೋಶ ವ್ಯಕ್ತಪಡಿಸಿರುವ ಘಟನೆಯೂ ನಡೆದಿದೆ. 

ಲೇಖಕ ರವಿ ಹಂಜ್​​ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿರುವ ಬಸವಣ್ಣನವರ ಅನುಯಾಯಿಗಳು, ಪುಸ್ತಕದಲ್ಲಿ ಆಕ್ಷೇಪಾರ್ಹ ಅಂಶ ದಾಖಲಾಗಿದೆ. ಹೀಗಾಗಿ ಪುಸ್ತಕ ನಿಷೇಧಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

'ಬಸವ ಮಂಟಪ' ಪುಸ್ತಕದಲ್ಲಿ ಬಸವಣ್ಣ ಅವರಿಗೆ ಅವಮಾನ ಮಾಡಲಾಗಿದ್ದು, ರಾಜ್ಯಾದ್ಯಂತ ಬಸವ ಬೆಂಬಲಿಗರಿಗೆ ನೋವಾಗಿದೆ ಎಂದು ಸಚಿವ ಎಂ.ಬಿ.ಪಾಟೀಲ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸಚಿವ ಶರಣಪ್ರಕಾಶ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇದು ಬಸವಣ್ಣನವರ ಘನತೆಗೆ ಧಕ್ಕೆ ತರುವ ಪ್ರಯತ್ನ ಎಂದಿದ್ದಾರೆ. ಬಸವಣ್ಣನವರು ಕೇವಲ ಲಿಂಗಾಯತ ಸಮುದಾಯಕ್ಕೆ ಸೀಮಿತರಲ್ಲ, ಮನುಷ್ಯತ್ವವೇ ಧರ್ಮ ಎಂದು ಸಾರಿದವರು. 

ಸಂಕವ್ವ, ಮಾದಾರ ಚೆನ್ನಯ್ಯ, ಡೋಹರ ಕಕ್ಕಯ್ಯ, ಅಂಬಿಗರ ಚೌಡಯ್ಯ ಮುಂತಾದ ಎಲ್ಲಾ ಸಮುದಾಯದವರಿಗೂ ಅನುಭವ ಮಂಟಪದಲ್ಲಿ ಸ್ಥಾನ ನೀಡಿದವರು. 

ಅಂತಹ ಮಹಾನ್ ವ್ಯಕ್ತಿಯನ್ನು ಕೊಲೆಗಡುಕ, ಲೂಟಿಕೋರ ಎಂದು ಬಿಂಬಿಸುತ್ತಿರುವುದನ್ನು ಒಪ್ಪಲಾಗದು ಎಂದು ಕಿಡಿ ಕಾರಿದ್ದಾರೆ. ಇದೆಲ್ಲದರ ಹಿಂದೆ ಹಿರಿಯ ಪತ್ರಕರ್ತ ವಿಶ್ವೇಶ್ವರ್​​ ಭಟ್​​ ಇರೋದಾಗಿಯೂ ಅವರು ಆರೋಪಿಸಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST