ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ನೀಡುವಂತೆ ಆಡಳಿತಾರೂಢ ಕಾಂಗ್ರೆಸ್ ನಾಯಕರಿಂದ ಒತ್ತಡ ಹೆಚ್ಚುತ್ತಿದ್ದಂತೆ ಹೊರಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹಂಗಾಮಿ ಸಭಾಪತಿಯಾಗಿ ಬಸವರಾಜ್ ಹೊರಟ್ಟಿ ಮುಂದುವರೆಯುವ ಸಾಧ್ಯತೆ ಇದೆ.ಅವಧಿ ಮುಗಿಯುವ ಮುನ್ನವೇ ರಾಜೀನಾಮೆ ಕೇಳಿದ್ದಕ್ಕೆ ಹೊರಟ್ಟಿಯವರು ತಾವು ರಾಜೀನಾಮೆ ನೀಡುವುದಿಲ್ಲ ಎಂದು ಪಟ್ಟು ಹಿಡಿದಿದ್ದರು. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಇಂದು ಹೊರಟ್ಟಿ ವಿರುದ್ಧ ಅವಿಶ್ವಾಸ ನಿರ್ಣಯ ನೋಟಿಸ್ ಜಾರಿಗೆ ಮುಂದಾಗಿತ್ತು.
ಈ ಬೆಳವಣಿಗೆ ಬೆನ್ನಲ್ಲೇ ಬಸವರಾಜ್ ಹೊರಟ್ಟಿ ಇಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಚರ್ಚಿಸಿದ್ದರು.
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಸುದೀರ್ಘ ಮನವೊಲಿಕೆ ಬಳಿಕ ಸಭಾಪತಿ ಸ್ಥಾನಕ್ಕೆ ಹೊರಟ್ಟಿ ರಾಜೀನಾಮೆ ನೀಡಿದ್ದಾರೆ. ಸ್ವಇಚ್ಛೆಯಿಂದ ರಾಜೀನಾಮೆ ನೀಡಿದ್ದಾಗಿ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.


