Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ, ಚಿಕ್ಕೋಡಿ ಲೋಕಸಭಾ ಚುನಾವಣೆ ಮುಗಿಯುತ್ತಲೇ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗೋಷ್ಠಿ

Advertisement

  1. ಬೆಳಗಾವಿ : -ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಸೇರಿದಂತೆ ರಾಜ್ಯದಲ್ಲಿ 14ರಿಂದ 17 ಸೀಟುಗಳನ್ನು ಗೆಲ್ಲುತ್ತೇವೆ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು.



ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದವರು ಮುಂಬೈ ಹೈದರಾಬಾದ್ ಕರ್ನಾಟಕದಲ್ಲಿ ಹೆಚ್ಚು ಕಾಂಗ್ರೆಸ್ ಸೀಟ್ ಗಳು ಗೆಲ್ಲುವ ವಿಶ್ವಾಸ ಇದ್ದು ಸಚಿವರ ಮಕ್ಕಳಿಗೆ ಟಿಕೆಟ್ ಸಿಕ್ಕಿದ್ದರಿಂದ ಪಕ್ಷಕ್ಕೆ ಅನುಕೂಲವಾಗಿದೆ 2019 ರ ಲೋಕಸಭೆ ಚುನಾವಣೆಗೆ ಹೋಲಿಸಿದರೆ , ಈ ಬಾರಿ ನಾವು ಹೆಚ್ಚಿನ ಸೀಟು ಗೆಲ್ಲಲು ಅವಕಾಶ ಇದೆ ಎಂದರು.



ಕಾಂಗ್ರೆಸ್ ಪಕ್ಷದಲ್ಲಿ ಸಚಿವರು ಮಕ್ಕಳಿಗೆ ಟಿಕೆಟ್ ನೀಡಿದ್ದು ಹೈಕಮಾಂಡ ಬಿಟ್ಟು ವಿಚಾರ , ಈ ಕುರಿತು ಬಿಜೆಪಿಯವರಿಗೆ ಟೀಕಿಸಲು ನೈತಿಕ ಹಕ್ಕಿಲ್ಲ ಬಿಜೆಪಿಯಲ್ಲಿಯೂ ಕೂಡ ಸಚಿವರ ಮಕ್ಕಳಿಗೆ ಟಿಕೆಟ್ ನೀಡಿದ ಉದಾಹರಣೆಗಳು ಸಾಕಷ್ಟಿವೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಎಲ್ಲಿಯೂ ನೀರಿನ ಸಮಸ್ಯೆ ಇಲ್ಲ ಈಗಾಗಲೇ ಮಳೆಯು ಪ್ರಾರಂಭವಾಗಿದ್ದು ,ಅಲ್ಲಲ್ಲಿ ಎರಡು ಗಂಟೆಗಳ ಕಾಲ ಹೆಚ್ಚು ಮಳೆಯಾಗಿದೆ ಇನ್ನು ಸಮರ್ಪಕ ಕುಡಿಯುವ ನೀರು ಪೂರೈಕೆ ಪ್ರತಿ ಗ್ರಾಮ ಪಂಚಾಯತಿ ಹೊಸ ಟ್ಯಾಂಕರ್ ಖರೀದಿಸಲು ಸೂಚಿಸಿದ್ದೇವೆ , ಕೊಯ್ನಾ ಜಲಾಶಯದಿಂದ ನೀರು ಬಿಡುಗಡೆ ಸಂಬಂಧ ಈಗಾಗಲೇ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಮಹಾರಾಷ್ಟ್ರದಿಂದ ನೀರು ಬಿಡುತ್ತಾರೆ ಎನ್ನುವ ವಿಶ್ವಾಸವಿದೆ , ಹಿಡಕಲ್ ಡ್ಯಾಮ್ ನಿಂದ ಕೃಷ್ಣ ನದಿಗೆ ಈಗಾಗಲೇ ಒಂದು ಟಿಎಂಸಿ ನೀರು ಬಿಟ್ಟಿದ್ದೇವೆ ಇನ್ನೊಂದು ಟಿಎಂಸಿ ನೀರು ಸದ್ಯದಲ್ಲಿ ಬಿಡುಗಡೆಗೊಳಿಸಲಾಗುವುದು ಎಂದು ಭರವಸೆ ನೀಡಿದರು.

ಬೆಳಗಾವಿಯಲ್ಲಿ ಚರಂಡಿ ನೀರು ಸರಿಯಾಗಿ ಸರಬರಾಜು ಆಗುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿ ಚರಂಡಿ ನೀರು ಸಮಸ್ಯೆಗೆ ಬಗ್ಗೆ ಮಹಾನಗರ ಪಾಲಿಕೆ ಅವರ ಪರಿಹರಿಸುತ್ತಾರೆ.

ಹುಬ್ಬಳ್ಳಿಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ , ಸ್ನೇಹ ಅಂಜಲಿ ಕೊಲೆ ಕೇಸ್ ನಂತಹ ಪ್ರಕರಣಗಳು ಎಲ್ಲಾ ಸರ್ಕಾರದ ಆಡಳಿತದ ಅವಧಿಯಲ್ಲಿ ಈ ರೀತಿ ಘಟನೆಗಳು ಸಂಭವಿಸಿವೆ ಇಂಥ ಘಟನೆಗಳ ಮೇಲೆ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದರು.

ಇನ್ನೂ ಲೋಕೋಪಯೋಗಿ ಇಲಾಖೆಯಿಂದ ಜಿಲ್ಲೆಯಲ್ಲಿ ಒಟ್ಟು ನೂತನವಾಗಿ ನೂರು ಶಾಲೆಗಳನ್ನು ನಿರ್ಮಿಸಲಾಗುತ್ತಿದ್ದು, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಲ ಐದು ಶಾಲೆಗಳನ್ನು ನಿರ್ಮಿಸಲಾಗುತ್ತಿದೆ, ವಿದ್ಯಾರ್ಥಿಗಳಿಗೆ ಉತ್ತಮ ಶೈಕ್ಷಣಿಕ ಸೌಲಭ್ಯಗಳನ್ನು ಒದಗಿಸುವ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ರಾಜು ಸೇಠ್ ,ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನಾವಲಗಟ್ಟಿ,
ಕೆ ಪಿ ಸಿ ಸಿ ಪ್ರಧಾನ ಕಾರ್ಯದರ್ಶಿಗಳಾದ ದಯಾನಂದ ಪಾಟೀಲ್, ಸುನಿಲ್ ಹಣಮನ್ನವರ್, ರಾಜ ಸಲೀಂ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

ವರದಿ : ಮಂಜುನಾಥ ರಜಪೂತ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ