LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಡಿ.2ರಿಂದ ಬೆಳಗಾವಿ ಅಧಿವೇಶನ: 5,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆ

Advertisement

ಬೆಳಗಾವಿ: ಬೆಳಗಾವಿಯಲ್ಲಿ ಡಿಸೆಂಬರ್ 2 ರಿಂದ ಆರಂಭವಾಗಲಿರುವ ವಿಧಾನಮಂಡಲ ಚಳಿಗಾಲದ ಅಧಿವೇಶನಕ್ಕೆ ವ್ಯಾಪಕ ಭದ್ರತಾ ಸಿದ್ಧತೆಗಳು ನಡೆಯುತ್ತಿವೆ. 

ಪೊಲೀಸ್ ಆಯುಕ್ತ ಪ್ರಕಾಶ್ ನಿಕ್ಕಂ ಅವರ ನೇತೃತ್ವದಲ್ಲಿ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲಾಗಿದ್ದು, ಸುವರ್ಣ ಸೌಧ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.

ಅಧಿವೇಶನದ ಸಮಯದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು 5,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗುತ್ತಿದೆ. 

ಇದರಲ್ಲಿ ವಿವಿಧ ಜಿಲ್ಲೆಗಳಿಂದ ಆಗಮಿಸುವ ಪೊಲೀಸರ ಜೊತೆಗೆ ಕೆಎಸ್‌ಆರ್‌ಪಿ ತುಕುಡಿಗಳು ಸೇರಿವೆ. ಭದ್ರತೆಯ ಭಾಗವಾಗಿ ಸಿಸಿಟಿವಿ ಕ್ಯಾಮೆರಾಗಳ ಅಳವಡಿಕೆ ಮತ್ತು ಬ್ಯಾರಿಕೇಡಿಂಗ್ ಕಾರ್ಯ ಕೂಡ ಪ್ರಗತಿಯಲ್ಲಿದೆ.

ಅಧಿವೇಶನ ಸಂದರ್ಭದಲ್ಲಿ ನಡೆಯುವ ಪ್ರತಿಭಟನೆಗಳನ್ನು ನಿರ್ವಹಿಸಲು ನಿರ್ದಿಷ್ಟ ಸ್ಥಳಗಳನ್ನು ಗುರುತಿಸಲಾಗಿದೆ. 

ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ತಡೆಯನ್ನು ತಡೆಯಲು ನವೆಂಬರ್ 20 ರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಆಯುಕ್ತ ಪ್ರಕಾಶ್ ನಿಕ್ಕಂ ತಿಳಿಸಿದ್ದಾರೆ. ಕಾನೂನು ಸುವ್ಯವಸ್ಥೆಗೆ ಭಂಗ ತರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಾಗಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲೆಯಾದ ಮಹಿಳೆ ದಿಢೀರ್ ಪ್ರತ್ಯಕ್ಷ: ಪೊಲೀಸರ ಎಡವಟ್ಟಿಗೆ 2.5 ವರ್ಷ ಜೈಲು ಶಿಕ್ಷೆ ಅನುಭವಿಸಿದ ನಿರಪರಾಧಿ ವಿಎಒ ಪರೀಕ್ಷಾ ಅಕ್ರಮ: ನಾಲ್ವರು ಕಾನ್ಸ್‌ಟೆಬಲ್‌ಗಳು ಸಸ್ಪೆಂಡ್, ಪಿಎಸ್‌ಐ, ಸಿಪಿಐಗೆ ಸಂಕಷ್ಟ ಮಕ್ಕಳಾಗಿಲ್ಲ ಎಂದು ಹೀಯಾಳಿಸುತ್ತಿದ್ದ ಪತಿ : ಚಾಕುವಿನಿಂದ ಇರಿದು ಕೊಂದ ಪತ್ನಿಬಾಗಲಕೋಟೆ ಜಿಲ್ಲೆಯ ಆರು ಪಟ್ಟಣ ಪಂಚಾಯತಿಗಳ ಮೇಲೆ ಲೋಕಾಯುಕ್ತ ದಾಳಿಡಿ.2ರಿಂದ ಬೆಳಗಾವಿ ಅಧಿವೇಶನ: 5,000ಕ್ಕೂ ಹೆಚ್ಚು ಪೊಲೀಸರಿಂದ ಬಿಗಿ ಭದ್ರತೆಬಂಗಾರದ ಬೆಲೆಯಲ್ಲಿ ಭಾರಿ ಕುಸಿತ : ಖರೀದಿಗೆ ಇದೇ ಬೆಸ್ಟ್ ಟೈಂ! ಭ್ರಷ್ಟಾಚಾರ ಆರೋಪ ಹೊತ್ತಿರುವ ಸಿಎಂ ವಿಶೇಷ ಕರ್ತವ್ಯಾಧಿಕಾರಿಯಾಗಿ ನೇಮಕ: ದೂರು ನಾಪತ್ತೆಯಾಗಿದ್ದ ಅಧಿಕಾರಿಗಳು ಶವವಾಗಿ ಪತ್ತೆ :ಉಗ್ರರ ದಾಳಿ ಶಂಕೆ ಪಾವಗಡ  ತಾಲ್ಲೂಕು ಆಡಳಿತವೇ.ನಾಚಿಕೆ ಆಗಲ್ವಾ.ಕಳ್ಳತನ ಪ್ರಕರಣ ರಾಜಿ ಮಾಡಿಸಲು 50 ಸಾವಿರ ರೂ. ಲಂಚಕ್ಕೆ ಬೇಡಿಕೆ: ಲೋಕಾಯುಕ್ತ ಬಲೆಗೆ ಪೊಲೀಸ್ ಸಿಬ್ಬಂದಿ