Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿ ಶಿವಾನಂದ ನೀಲಣ್ಣನವರ್‌ ವಂಚನೆ ಕೇಸ್ : ಪ್ರಕರಣಕ್ಕೀಗ ಸಿಐಡಿ ಎಂಟ್ರಿ, ತನಿಖೆ ಚುರುಕು

Advertisement

ಬೆಳಗಾವಿ : RBI ನಿಯಮ ಉಲ್ಲಂಘಿಸಿ, 35 ಸಾವಿರ ಜನರಿಂದ ಸಾವಿರಾರು ಕೋಟಿ ಹಣ ಠೇವಣಿ ಸಂಗ್ರಹಿಸಿದ ಆರೋಪದಡಿ ಬಂಧಿಸಲ್ಪಟ್ಟ ಶಿವಂ ಅಸೋಸಿಯೇಟ್ಸ್ ಮಾಲೀಕ ಶಿವಾನಂದ ನೀಲಣ್ಣವರ ಅವರ ಪ್ರಕರಣಕ್ಕೀಗ ಸಿಐಡಿ ಎಂಟ್ರಿ ಕೊಟ್ಟಿದ್ದು, ತನಿಖೆ ಚುರುಕುಗೊಳಿಸಿದ್ದಾರೆ.

ಶಿವಾನಂದ ನೀಲಣ್ಣವರ ಬಂಧನ ಮಾಡಿರುವ ಮಾಳಮಾರುತಿ ಪೊಲೀಸ್ ಠಾಣೆಗೆ ಬೆಂಗಳೂರಿನಿಂದ ಸಿಐಡಿ ಅಧಿಕಾರಿಗಳ ತಂಡ ಇಂದು ಬೆಳಗ್ಗೆ ಭೇಟಿ‌ ನೀಡಿತು

ಸಿಐಡಿ ಡಿವೈಎಸ್ಪಿ ನೇತೃತ್ವದ ತಂಡವು ಪ್ರಕರಣದ ಕುರಿತು ಮಾಹಿತಿ ಕಲೆ ಹಾಕುತ್ತಿದೆ. ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ ಅವರ ಬಳಿ ಹಲವು ಮಾಹಿತಿಯನ್ನು ಸಿಐಡಿ ತಂಡವು ಪಡೆದುಕೊಂಡಿತು.

ಆರ್​ಬಿಐ ನಿಯಮ ಪಾಲಿಸದೇ 35,000 ಜನರಿಂದ ಠೇವಣಿ ಸಂಗ್ರಹಿಸಿರುವ ಸಂಬಂಧ ಮಾಳಮಾರುತಿ ಠಾಣೆಯಲ್ಲಿ ಶಿವಾನಂದ ನೀಲಣ್ಣವರ ವಿರುದ್ಧ ಪ್ರಕರಣ ದಾಖಲಾಗಿದ್ದು, ನಿನ್ನೆ ರಾತ್ರಿ ಆರೋಪಿನ್ನು ಬಂಧಿಸಲಾಗಿತ್ತು. 

ಎಸಿಪಿ ಸಂತೋಷ ಸತ್ಯನಾಯಕ ನೇತೃತ್ವದ ತಂಡವು ನಿನ್ನೆ ಇಡೀ ರಾತ್ರಿ ವಿಚಾರಣೆ ನಡೆಸಿದೆ. ಇಂದು ಬೆಳಗ್ಗೆ ಸ್ಥಳ‌ ಮಹಜರಿಗೆ ಕರೆದೊಯ್ಯಲಾಗಿದೆ.

ತನಿಖಾಧಿಕಾರಿ ಎಸಿಪಿ ಸಂತೋಷ ಸತ್ಯನಾಯಕ್, ಸಿಪಿಐ ಬಿ.ಆರ್.ಗಡ್ಡೇಕರ್ ನೇತೃತ್ವದಲ್ಲಿ ಬೆಳಗಾವಿ ಶಿವಬಸವ ನಗರದಲ್ಲಿ ಮೂರು ಕಚೇರಿಗಳು, ಮನೆಯಲ್ಲಿ ಸ್ಥಳ ಮಹಜರು ಮಾಡಲಾಗುತ್ತಿದೆ. ಕಚೇರಿ ಮತ್ತು ಮನೆಯಲ್ಲಿರುವ ವಸ್ತು ಮತ್ತು ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಲಿದ್ದಾರೆ. 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯದ ಅರ್ಹರಿಗಷ್ಟೇ ಗ್ಯಾರಂಟಿ ಯೋಜನೆಗಳು : ಎಂ. ಬಿ. ಪಾಟೀಲ ಬೆಂಗಳೂರಿನ ಹಲವು ಆರ್ ಟಿ ಓ ಕಚೇರಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶಬೆಳಗಾವಿಯಲ್ಲಿ ಕಸದ ರಾಶಿಯಲ್ಲಿ ಒಟ್ಟು 59 ಜೀವಂತ ಗುಂಡುಗಳು ಪತ್ತೆಚಿಕ್ಕ ಪಾನ್ ಅಂಗಡಿಗೆ 1.85 ಲಕ್ಷ ರೂ. ವಿದ್ಯುತ್ ಬಿಲ್ : ಭಯದಿಂದ ವ್ಯಾಪಾರಿ ಆತ್ಮಹತ್ಯೆ ಬಸ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು, ಹತ್ತಕ್ಕೂ ಹೆಚ್ಚು ಮಂದಿಗೆ ಗಾಯಇಬ್ಬರು ಅಪ್ರಾಪ್ತ ಅಕ್ಕ-ತಂಗಿಯ ಮೇಲೆ ಕಿರಾತಕನಿಂದ ಲೈಂಗಿಕ ದೌರ್ಜನ್ಯಡಾಕ್ಟರ್ ಚೀಟಿ ಇಲ್ಲದೇ ಯಾವುದೇ ಕೆಮ್ಮಿನ ಔಷಧ ಮಾರಾಟ ಮಾಡುವಂತಿಲ್ಲ : ಕೇಂದ್ರ ಸರ್ಕಾರಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಭ್ರಷ್ಟ ಅಧಿಕಾರಿಗಳ ಮೇಲೆ ಲೋಕಾಯುಕ್ತ ದಾಳಿ ಸೋಮವತಿ ಅಮಾವಾಸ್ಯೆ ಅಂಗವಾಗಿ ಖಾನಾಪುರದಲ್ಲಿ ಶ್ರೀ ಮೈಲಾರ ಮಲ್ಲಣ್ಣನ ಪಲ್ಲಕ್ಕಿ ಉತ್ಸವ ವೈಭವ ವಿಶ್ವಕಪ್ ಫುಟ್‌ಬಾಲ್: ನ್ಯೂಜಿಲೆಂಡ್- ಇರಾನ್ ಪಂದ್ಯ ಡ್ರಾ