LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ವಿಜಯೇಂದ್ರ ಕ್ಷೇತ್ರದಿಂದಲೇ ಭಾರತ್ ಜೋಡೋ-2 ಪಾದಯಾತ್ರೆ: ಬಿ.ಕೆ.ಹರಿಪ್ರಸಾದ್ ಘೋಷಣೆ 

Advertisement

ಬೆಂಗಳೂರು: 2028ರ ವಿಧಾನಸಭಾ ಚುನಾವಣೆಗಾಗಿ ಆಡಳಿತಾರೂಡ ಕಾಂಗ್ರೆಸ್ ಪಕ್ಷ ಈಗಿನಿಂದಲೆ ಭರ್ಜರಿ ಸಿದ್ಧತೆ ನಡೆಸಿದ್ದು, ರಾಜ್ಯದ 84 ಕ್ಷೇತ್ರಗಳಲ್ಲಿ ಪಾದಯಾತ್ರೆಗೆ ಯೋಜನೆ ರೂಪಿಸಿದೆ.

ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಹಾಗೂ ಮುಂಬರುವ ವಿಧಾನಸಭ ಅಚುನಾಅವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕರ್ನಾಟಕದಾದ್ಯಂತ ಕಾಂಗ್ರೆಸ್ ಪಾದಯಾತ್ರೆ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಬಿ.ಕೆ.ಹರಿಪ್ರಸಾದ್, ಸೆಪ್ಟೆಂಬರ್ 30ರಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಿಂದ ಪಾದಯಾತ್ರೆ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ. 'ಭಾರತ್ ಜೋಡೋ ಪಾದಯಾತ್ರೆ-2' ಹೆಸರಿನಲ್ಲಿ ನಡೆಯಲಿರುವ ಈ ಪಾದಯಾತ್ರೆ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿರುವ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ನಡೆಯಲಿದೆ ಎಂದು ಹೇಳಿದರು.

ರಾಜ್ಯದ ಒಟ್ಟು 84 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸುವ ಉದ್ದೇಶವಿದ್ದು, ಪ್ರತಿ ಕ್ಷೇತ್ರದಲ್ಲಿ ಸುಮಾರು 10 ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಶಿಕಾರಿಪುರದಿಂದ ಆರಂಭವಾಗುವ ಪಾದಯಾತ್ರೆ ಅಕ್ಟೋಬರ್ 20ರವರೆಗೆ ನಡೆಯಲಿದೆ. 84 ಕ್ಷೇತ್ರಗಳಲ್ಲಿ 42 ಕ್ಷೇತ್ರಗಳ ಪಾದಯಾತ್ರೆ ಪೂರ್ಣಗೊಂಡ ಬಳಿಕ ಅಂತಿಮ ಕಾರ್ಯಕ್ರಮ ಎಲ್ಲಿ ನಡೆಯಲಿದೆ ಎಂಬುದನ್ನು ತಿಳಿಸಲಾಗುವುದು ಎಂದು ಹರಿಪ್ರಸಾದ್ ಹೇಳಿದ್ದಾರೆ. ಉತ್ತರ ಕರ್ನಾಟಕದ ಯಾವುದಾದರೂ ಒಂದು ಕ್ಷೇತ್ರದಲ್ಲಿ ಅಂತಿಮ ಕಾರ್ಯಕ್ರಮ ನಡೆಯುವ ಸಾಧ್ಯತೆಯಿದೆ ಎಂದಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ ಗೆ 223 ರನ್ ಗಳ ಸುಲಭ ಗೆಲುವು ರೈತರ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ನೀಡಬೇಕು: ರೈತರ ಮನವಿಮಾನ್ವಿಯಲ್ಲಿ ಭವ್ಯ ಶ್ರೀ ಜಗಜ್ಯೋತಿ ಬಸವೇಶ್ವರ ವೃತ್ತ ನಿರ್ಮಾಣಕ್ಕೆ ಶೀಘ್ರ ಕ್ರಮ: ಎನ್.ಎಸ್ ಬೋಸರಾಜುಪ್ರದೋಷ್ ಮಾಫಿ ಸಾಕ್ಷಿ ವಿಚಾರಣೆ ವೇಳೆ ತಲೆ ಮೇಲೆ ಕೈ ಇಟ್ಟು ಕುಳಿತ ದರ್ಶನ್ಸಚಿವ ಲಕ್ಷ್ಮಣ ಸವದಿಗೆ ಸಮನ್ಸ್‌ ಜಾರಿ : ಖುದ್ದು ಹಾಜರಾಗಲು ಕೋರ್ಟ್​​​​​ಗೆ ಆದೇಶ ವಿಜಯೇಂದ್ರ ಕ್ಷೇತ್ರದಿಂದಲೇ ಭಾರತ್ ಜೋಡೋ-2 ಪಾದಯಾತ್ರೆ: ಬಿ.ಕೆ.ಹರಿಪ್ರಸಾದ್ ಘೋಷಣೆ ರಾಜನಾಥ್ ಸಿಂಗ್ ಭೇಟಿಯಾದ ಡಿ.ಕೆ ಶಿವಕುಮಾರ್ : ಪ್ರಮುಖ ಬೇಡಿಕೆಗಳ ಕುರಿತು ಮನವಿ ಡಿವೋರ್ಸ್ ಗೆ ವಿರೋಧ : ಪತಿ ಮನೆ ಮುಂದೆ ನಾಲ್ಕು ದಿನಗಳಿಂದ ಧರಣಿ ಕುಳಿತ ಪತ್ನಿರೈತರ ಪಂಪ್‌ಸೆಟ್‌ಗಳಿಗೆ ನಿರಂತರ 10 ಗಂಟೆ ವಿದ್ಯುತ್ ನೀಡಬೇಕು:ನೀರಮಾನ್ವಿ ಗ್ರಾಮದ ರೈತರ ಮನವಿಕಿತ್ತೂರ ಉತ್ಸವದ ಯಶಸ್ವಿಗೆ ಸಾರ್ವಜನಿಕರ ಸಹಭಾಗಿತ್ವ ಅಗತ್ಯ : ಸಚಿವ ಸತೀಶ ಜಾರಕಿಹೊಳಿ