Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸಮಾನತೆ ಮತ್ತು ಏಕತೆಗೆ ಹೋರಾಡಿದ ಮಹಾನ್ ಚೇತನ ಭಾರತ ರತ್ನ ಡಾ. ಬಿ ಆರ್ ಅಂಬೇಡ್ಕರ್ :  ಸಂಗನ ಬಸಪ್ಪ ಬಿರಾದಾರ್

Advertisement
ಬೆಂಗಳೂರು : ಸಾಮಾಜಿಕ ಸಮಾನತೆ, ಅಸ್ಪೃಶ್ಯತಾ ಏಕತೆಗೆ ಹೋರಾಡಿದ ಮಹಾನ್ ಚೇತನ ಭಾರತ ರತ್ನ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಆದರ್ಶಗಳು ಇಂದಿಗೂ ಸಮಾಜಕ್ಕೆ ದಾರಿದೀಪವಾಗಿವೆ ಎಂದು ಚಿಂತಕರು ವಾಗ್ಮಿಗಳು ಬುದ್ದಿಜೀವಿಗಳು ಮತ್ತು ರಾಷ್ಟ್ರೀಯ ಅಂತಾರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಡಾ. ಸಂಗನ ಬಸಪ್ಪ ಬಿರಾದಾರ್ ಹೇಳಿದರು.

ಅವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹೆಗ್ಗನಹಳ್ಳಿ ಮುಖ್ಯ ರಸ್ತೆ ಬಸ್ ನಿಲ್ದಾಣ ಹತ್ತಿರ ಡಾ ‌ಬಿ ಆರ್ ಅಂಬೇಡ್ಕರ್ ಅಭಿಮಾನಿಗಳ ವೇದಿಕೆ ಸಂಸ್ಥಾಪಕ ರಾಜ್ಯಾಧ್ಯಕ್ಷ ಉಮೇಶ್ ಗೌಡ ರಾವಣ್ ಅವರ ನೇತೃತ್ವದಲ್ಲಿ ಆಯೋಜಿಸಿದ್ದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಅಂಗವಾಗಿ ಡಾ. ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿ ಮೆರವಣಿಗೆಗೆ ತಯಾರಿಯಾಗಿ ನಿಂತಿರುವ ಬೆಳ್ಳಿ ರಥ ವಾಹನಕ್ಕೆ ಚಾಲನೆ ನೀಡಿ ಡಾ. ಬಿರಾದಾರ್ ನೆನದ್ದಿದ ಜನರನ್ನು ಉದ್ದೇಶಿಸಿ ಮಾತನಾಡಿದರು.

ಜನ ವಿಕಾಸ ಕೋ ಆಪರೇಟಿವ್ ಸೊಸೈಟಿ ಸಂಸ್ಥಾಪಕ ಅಧ್ಯಕ್ಷ ದಯಾನಂದ್ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಅವರ ವಾಣಿಗಳನ್ನು ಮನುಷ್ಯನ ಬದುಕಿಗೆ ಪ್ರೇರಣೆ ಎಂದು ಡಾ. ಬಿ ಆರ್ ಅಂಬೇಡ್ಕರ್ ಅವರ ಬಾಲ್ಯ ಜೀವನ ಅವರ ಕೊಡಿಗೆ ಬಗ್ಗೆ ಎಳೆ ಎಳೆಯಾಗಿ ಸಾರ್ವಜನಿಕರಿಗೆ ತಿಳಿಸಿ ಕೊಟ್ಟರು.

ಡಾ ಬಿ ಆರ್ ಅಂಬೇಡ್ಕರ್ ಅಭಿಮಾನಿಗಳ ವೇದಿಕೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಉಮೇಶ್ ಗೌಡ ರಾವಣ್ ಸರ್ವರಿಗೂ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅಭಿಮಾನಿಗಳ ವೇದಿಕೆಯ ಪದಾಧಿಕಾರಿಗಳು ಸದಸ್ಯರು, ಕಾರ್ಮಿಕ ಸಂಘಟನೆಯ ಮುಖಂಡ ಚೆನ್ನಕೇಶವ, ಇಸ್ಲಾಂ ಸಮಾಜದ ಯುವ ಮುಖಂಡ ಇಮಾಮ್ ಸೇರಿದಂತೆ ವಿವಿಧ ಸಂಘಟನೆಗಳ ಮುಖಂಡರು ಮಹಿಳೆಯರು ಕಾರ್ಯಕರ್ತರು ಸಮಸ್ತ ನಾಗರಿಕ ಬಂಧು ಭಗನಿಯರು ಉಪಸ್ಥಿತರಿದ್ದರು.


ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತೇವಗೊಂಡ ಮೈದಾನ: ಆರ್‌ಸಿಬಿ ಪಂದ್ಯ ವಿಳಂಭ ಮೊದಲ ಟೆಸ್ಟ್ಗೆ ಇಂಗ್ಲೆAಡ್ ತಂಡದಾಯ್ಕೆಡಾಲರ್‌ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟಕ್ಕೆ ಕುಸಿದ ರೂಪಾಯಿಹಿಜಾಬ್ ನಿಷೇಧ ವಾಪಸ್ ಪಡೆದ ರಾಜ್ಯ ಸರ್ಕಾರ ಸಗಣಿ ಭಕ್ತರು ಗಂಜಲ ಕುಡಿದು ಜೀವನ ಮಾಡುತ್ತಾರೆ, ಸಾಮಾನ್ಯರು ಏನು ಮಾಡಬೇಕು : ಬಿ. ಕೆ ಹರಿಪ್ರಸಾದ್ ಮಣ್ಣಲ್ಲಿ ಮಣ್ಣಾದ ನಟ ದಿಲೀಪ್ ರಾಜ್ : ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಕ್ರಿಯೆ ಇನ್ಮುಂದೆ ಮೆಟ್ರೋದಲ್ಲಿ ಪ್ರಯಾಣ, ವಾಹನ ಬಳಕೆ ಶೇ. 40 ರಷ್ಟು ಕಡಿತ : ಆರ್. ಅಶೋಕ್ ರಟಕಲ್ ಗ್ರಾಮದಲ್ಲಿ ಕುಡಿಯುವ ನೀರಿಗಾಗಿ ಜನರ ಆಕ್ರೋಶ ಧಾರ್ಮಿಕ ಕೇಂದ್ರಗಳ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅನನ್ಯ :ವಸಂತ ಎಸ್ಚರಂಡಿ ಸ್ವಚ್ಛಗೊಳಿಸಿ, ರೋಗಭಯವಿಲ್ಲದೆ ಬದುಕುವಂತೆ ಮಾಡಿ : ನಾಗರೀಕರ ಆಗ್ರಹ