ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಮರಕುಂಬಿ ಗ್ರಾಮದಲ್ಲಿ ಸುಮಾರು ₹5 ಕೋಟಿ 50 ಲಕ್ಷ ರೂಪಾಯಿ ವೆಚ್ಚದಲ್ಲಿ ಹಳ್ಳಕ್ಕೆ ನೂತನ ಸೇತುವೆ ನಿರ್ಮಾಣ ಮಾಡುವ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.
ಗ್ರಾಮದ ಜನರ ಸಂಚಾರಕ್ಕೆ ಅನುಕೂಲ ಕಲ್ಪಿಸುವ ಹಾಗೂ ಸ್ಥಳೀಯರ ಬಹುದಿನಗಳ ಅಗತ್ಯವನ್ನು ಈಡೇರಿಸುವ ನಿಟ್ಟಿನಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ.
ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೌಶಿಕ್ ಪಾಟೀಲ, ಗ್ರಾಮದ ಚುನಾಯಿತ ಪ್ರತಿನಿಧಿಗಳು, ಕಾಂಗ್ರೆಸ್ ಮುಖಂಡರು ಹಾಗೂ ಗ್ರಾಮದ ಗುರುಹಿರಿಯರು ಉಪಸ್ಥಿತರಿದ್ದರು.
ವರದಿ: ಸಮೀರ್ ಮುಲ್ಲಾನವರ


