Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೈದಿಗಳಿಗೆ ಬಿಗ್ ಶಾಕ್ : ಕಡ್ಡಾಯ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ 

Advertisement

ಬೆಂಗಳೂರು : ಪರಪ್ಪನ ಅಗ್ರಹಾರ ಜೈಲಿನಲ್ಲಿ ಅನುಚಿತ ವರ್ತನೆ ಹಾಗೂ ಅಕ್ರಮ ಚಟುವಟಿಕೆಗಳನ್ನು ಹತ್ತಿಕ್ಕಲು ಪ್ರಿಸನರ್ಸ್‌ ಟ್ರ್ಯಾಕಿಂಗ್ ಮೂವ್‌ಮೆಂಟ್‌ ಸಿಸ್ಟಂ ಪರಿಚಯಿಸಲಾಗಿದ್ದು, ಇನ್ನು ಮುಂದೆ ಪ್ರತಿ ಬ್ಯಾರಕ್‌ ಪ್ರವೇಶಿಸುವಾಗ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ ಕಡ್ಡಾಯ.

ಈಗಾಗಲೇ ಜೈಲಿನಲ್ಲಿ ಕೃತಕ ಬುದ್ದಿಮತ್ತೆ (ಎಐ) ಕ್ಯಾಮೆರಾಗಳ ಮೂಲಕ ಕೈದಿಗಳು ಮತ್ತು ಅಧಿಕಾರಿ-ಸಿಬ್ಬಂದಿ ಮೇಲೆ ನಿಗಾವಹಿಸಲಾಗಿತ್ತು. ಇದೀಗ ಅದರೊಂದಿಗೆ ಕೈದಿಗಳ ಫೋನ್ ಕರೆ ವ್ಯವಸ್ಥೆ ಸಂಪೂರ್ಣ ಡಿಜಿಟಲ್ ಟ್ರ್ಯಾಕಿಂಗ್, ಸಂದರ್ಶಕರನ್ನು ಭೇಟಿಯಾಗಲು ಡಿಜಿಟಲ್ ಟೋಕನ್ ಪದ್ಧತಿ ಸೇರಿ ಕಾರಾಗೃಹ ಬಂಧಿಗಳ ಚಲನವಲನಗಳ ಮೇಲೆ ಸಂಪೂರ್ಣ ನಿಗಾ ಇಡಲು ಈ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದಕ್ಕೆ ಸುಮಾರು 2.25 ಕೋಟಿ ರೂ. ವೆಚ್ಚವಾಗಿದೆ ಎಂದು ಜೈಲಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಜೈಲಿನ ಪ್ರತಿ ಬ್ಯಾರಕ್‌, ಸಂದರ್ಶಕರ ಕೊಠಡಿ, ಆಸ್ಪತ್ರೆ, ಕ್ಯಾಂಟೀನ್‌, ಅಡುಗೆ ಕೋಣೆ, ಗ್ರಂಥಾಲಯ, ಮೈದಾನ, ಕರಕುಶಲ ಕಾರ್ಖಾನೆಗಳು, ಬೇಕರಿ ಸೇರಿ ಎಲ್ಲೆಡೆ ಬಯೋಮೆಟ್ರಿಕ್‌ ವ್ಯವಸ್ಥೆ ಮಾಡಲಾಗಿದೆ. 

ಪ್ರಮುಖವಾಗಿ ಸಂದರ್ಶಕರ ಕೊಠಡಿಗೆ ಹೋಗುವಾಗ ಬಯೊಮೆಟ್ರಿಕ್‌ ಜೊತೆಗೆ ಟೋಕನ್ ಪಡೆಯಬೇಕು. ಈ ಟೋಕನ್​ನಲ್ಲಿ ಕೈದಿಯ ಹೆಸರು, ಸಂಖ್ಯೆ, ಸಮಯ ಸೇರಿ ಇತರೆ ಅಂಶಗಳನ್ನು ಜೈಲು ಸಿಬ್ಬಂದಿ ಸಾಫ್ಟ್‌ವೇರ್‌ನಲ್ಲಿ ಅಪ್‌ಡೇಟ್‌ ಮಾಡುತ್ತಾರೆ. ಹೀಗೆ ಪ್ರತಿ ಬಾರಿ ಸಂದರ್ಶಕರನ್ನು ಭೇಟಿಯಾಗಲು ಬಂದು ಹೋಗುವ ಕೈದಿಗಳ ಚಲನವಲನಗಳ ಸಂಪೂರ್ಣ ದತ್ತಾಂಶ ಸಂಗ್ರಹವಾಗಲಿದೆ.

ಇನ್ನು ಆಸ್ಪತ್ರೆ, ಗ್ರಂಥಾಲಯ ಹಾಗೂ ಕಾರ್ಯನಿಮಿತ್ತ ಬೇರೆ ಬ್ಯಾರಕ್‌ಗಳ ಪ್ರವೇಶ ದ್ವಾರದಲ್ಲೂ ಇದೇ ರೀತಿಯ ವ್ಯವಸ್ಥೆ ಮಾಡಲಾಗಿದೆ. ಇದರಿಂದ ಬೇರೆ ಕೈದಿಗಳ ಜತೆ ಸೇರಿ ಅಕ್ರಮ ಚಟುವಟಿಕೆಗೆ ಮುಂದಾದರೆ ಅಂತಹ ಕೈದಿಗಳ ವಿರುದ್ಧ ಕ್ರಮಕೈಗೊಳ್ಳಲು ಈ ಸಿಸ್ಟಂ ಸಹಕಾರಿಯಾಗಲಿದೆ. ಅಲ್ಲದೆ, ಎಲ್ಲೆಲ್ಲಿ ಎಷ್ಟು ಹೊತ್ತು ಕಾಲ ಕಳೆದರೂ ಸೇರಿ ಪ್ರತಿ ಕ್ಷಣವನ್ನು ಟ್ರ್ಯಾಕಿಂಗ್ ಮಾಡಬಹುದಾಗಿದೆ ಎಂದು ಜೈಲಿನ ಅಧಿಕಾರಿಗಳು ಮಾಹಿತಿ ನೀಡಿದರು.

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತಂಡಕ್ಕೆ ಮರಳಿದ ವಿರಾಟ್ ಕೊಹ್ಲಿ, ಜಸ್ಪಿçತ ಬೂಮ್ರಾಎಂಇಎಸ್ ಉದ್ಧಟತನ : ಜಿಲ್ಲಾಧಿಕಾರಿ ಕಚೇರಿ ಎದುರು ಕನ್ನಡ ಕಡ್ಡಾಯಕ್ಕೆ ವಿರೋಧ 9 ತಿಂಗಳ ಹೆಣ್ಣು ಶಿಶುವಿನ ಮೇಲೆ 12 ವರ್ಷದ ಬಾಲಕನ ಮೇಲೆ ಅತ್ಯಾಚಾರಮೊಸರು ಪ್ಯಾಕೆಟ್ ನಲ್ಲಿ ಸತ್ತ ಇಲಿ ಮರಿ ಪತ್ತೆ ಪಾಗಲ್ ಪ್ರೇಮಿ ಕಿರುಕುಳ:ಮದುವೆಗೆ ಒಂದು ದಿನ ಇರುವಾಗಲೇ ತಂದೆ, ತಾಯಿ ಹಾಗೂ ಮಗಳು ಆತ್ಮಹತ್ಯೆಸರ್ಕಾರಿ ಆಸ್ಪತ್ರೆಗಳಲ್ಲಿ ಸಮಸ್ಯೆ ಆಲಿಸಿಲು 24×7 ಸಹಾಯವಾಣಿ : ಯು. ಟಿ ಖಾದರ್ ಆರೆಸೆಸ್ ಗೆ ಪ್ರಿಯಾಂಕ್ ಖರ್ಗೆ ಅಪ್ಪನ ಮನೆಯಿಂದ ದುಡ್ಡು ಕೊಡ್ತಿಲ್ಲ : ಈಶ್ವರಪ್ಪ ವಾಗ್ದಾಳಿ ಯೋಗ ಭಾರತವು ಮಾನವಕುಲಕ್ಕೆ ನೀಡಿದ ಅಮೂಲ್ಯ ಕೊಡುಗೆ: ಮನೋಹರ ಬಿರಾದಾರರಾಜ್ಯಸಭೆಗೆ ನೂತನ ಸದಸ್ಯರಾದ ಪ್ರೋ.ಮಾ.ನಾಗರಾಜ ಅವರಿಗೆ ರಾಜ್ಯಮಟ್ಟದ ಅಭಿನಂದನಾ ಸಮಾರಂಭಹುಕ್ಕೇರಿ ತಾಲೂಕ ಘಟಕದ ವತಿಯಿಂದ ಕರ್ನಾಟಕ ರಕ್ಷಣಾ ವೇದಿಕೆ ಇವರಿಂದ ತಹಶೀಲ್ದಾರ್ ಅವರಿಗೆ ಮನವಿ