Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಿಯು ಉಪನ್ಯಾಸಕರಿಗೆ ಬಿಗ್ ಶಾಕ್ : ಇನ್ಮುಂದೆ ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಬೋಧನೆ ಕಡ್ಡಾಯ

Advertisement

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ (Pu College ) ಉಪನ್ಯಾಸಕರಿಗೆ ಕರ್ನಾಟಕ ಸರ್ಕಾರ ಬಿಗ್ ಶಾಕ್ (Shocking) ನೀಡಿದೆ.

ಇನ್ಮುಂದೆ ಪಿಯು ಉಪನ್ಯಾಸಕರು ಕೇವಲ 11 ಮತ್ತು 12ನೇ ತರಗತಿ (ಪಿಯುಸಿ) ಮಾತ್ರವಲ್ಲದೆ, ಪ್ರೌಢಶಾಲಾ ಹಂತದ 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಬೋಧನೆ ಮಾಡಬೇಕೆಂದು ಸರ್ಕಾರ ವಿಶೇಷ ರಾಜ್ಯಪತ್ರ ಪ್ರಕಟಿಸಿದೆ.

ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ದೀರ್ಘಕಾಲದಿಂದ ಕಾಡುತ್ತಿರುವ ಶಿಕ್ಷಕರ ಕೊರತೆಯನ್ನು ನೀಗಿಸಲು ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಗಳ (KPS) ನಿರ್ವಹಣೆಯನ್ನು ಸುಗಮಗೊಳಿಸಲು ಶಿಕ್ಷಣ ಇಲಾಖೆ ಈ ಹಠಾತ್ ತಿದ್ದುಪಡಿ ತಂದಿದೆ.

ಸರ್ಕಾರದ ಈ ಹೊಸ ನಿರ್ಧಾರವು ಈಗ ಶೈಕ್ಷಣಿಕ ವಲಯದಲ್ಲಿ ದೊಡ್ಡ ಸಂಚಲನ ಮೂಡಿಸಿದ್ದು, ಉಪನ್ಯಾಸಕರು ಮತ್ತು ಸರ್ಕಾರದ ನಡುವೆ ನೇರ ಸಂಘರ್ಷಕ್ಕೆ ದಾರಿ ಮಾಡಿಕೊಟ್ಟಿದೆ.​ಈ ಕರಡು ನಿಯಮದ ವಿರುದ್ಧ ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಸ್ನಾತಕೋತ್ತರ ಪದವಿ ಮುಗಿಸಿ 'ಗೆಜೆಟೆಡ್‌-ಬಿ' (Group-B) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರನ್ನು, 'ಗ್ರೂಪ್‌-ಸಿ' ವೃಂದಕ್ಕೆ ಒಳಪಡುವ ಪ್ರೌಢಶಾಲಾ ತರಗತಿಗಳಿಗೆ ನಿಯೋಜಿಸುವುದು ಸೇವಾ ನಿಯಮಗಳ ಸ್ಪಷ್ಟ ಉಲ್ಲಂಘನೆ ಎಂದು ಸಂಘಟನೆಗಳು ವಾದಿಸುತ್ತಿವೆ. 

ಈಗಾಗಲೇ ವಾರದ ಕಾರ್ಯಭಾರವನ್ನು 20 ಗಂಟೆಗಳಿಗೆ ಹೆಚ್ಚಿಸಿರುವುದರಿಂದ ತೀವ್ರ ಒತ್ತಡದಲ್ಲಿದ್ದು, ಈಗ ಹೈಸ್ಕೂಲ್ ಜವಾಬ್ದಾರಿಯನ್ನೂ ಹೊರಿಸುತ್ತಿರುವುದು ಅವೈಜ್ಞಾನಿಕ ಎಂದು ಉಪನ್ಯಾಸಕರು ದೂರಿದ್ದಾರೆ.

ಸದ್ಯ ಸರ್ಕಾರ ಈ ಕರಡು ತಿದ್ದುಪಡಿಗೆ ಆಕ್ಷೇಪಣೆ ಸಲ್ಲಿಸಲು 7 ದಿನಗಳ ಕಾಲಾವಕಾಶ ನೀಡಿದ್ದು, ಉಪನ್ಯಾಸಕರು ರಾಜ್ಯವ್ಯಾಪಿ ಪ್ರತಿಭಟನೆಗೆ ಸಜ್ಜಾಗುತ್ತಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST