ಬೆಂಗಳೂರು : ಬಿಗ್ ಬಾಸ್ ಮೂಲಕ ಜನಪ್ರಿಯರಾದ ನಿರೂಪಕಿ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ.
ಜಾಹ್ನವಿ ಅಧಿಕೃತವಾಗಿ ರಾಜಕೀಯಕ್ಕೆ ಧುಮುಕಿದ್ದಾರೆ. ಹೆಚ್‌ಡಿ ಕುಮಾರಸ್ವಾಮಿ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಬಿಗ್ ಬಾಸ್ ಮೂಲಕ ಖ್ಯಾತಿಗೊಂಡಿರುವ ನಿರೂಪಕಿ ಜಾಹ್ನವಿ, ಟಿವಿ ಶೋ, ರಿಯಾಲಿಟಿ ಶೋ, ಸಿನಿಮಾಗಳ ಮೂಲಕ ಗುರುತಿಸಿಕೊಂಡಿದ್ದಾರೆ.
ಇದೀಗ ಜಾಹ್ನವಿ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ಮನರಂಜನಾ ವೇದಿಕೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದ ಜಾಹ್ನವಿ ಇದೀಗ ಅಧಿಕೃತವಾಗಿ ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದಾರೆ.
ಬಿಗ್ ಬಾಸ್ ಮಾಜಿ ಸ್ಪರ್ಧಿ ಜಾಹ್ನವಿ ಅಧಿಕೃತವಾಗಿ ಜೆಡಿಎಸ್ ಪಕ್ಷ ಸೇರಿಕೊಂಡಿದ್ದಾರೆ. ಜೆಡಿಎಸ್ ಪಕ್ಷ 25 ವರ್ಷ ಪೂರೈಸಿದ ಸಂಭ್ರಮದಲ್ಲೇ ಜಾಹ್ನವಿ ಪಕ್ಷ ಸೇರಿಕೊಂಡಿದ್ದಾರೆ. ಮನರಂಜನಾ ಕ್ಷೇತ್ರದ ಜೊತೆಗೆ ಜಾಹ್ನವಿ ಇನ್ನು ರಾಜಕೀಯದಲ್ಲೂ ಸಕ್ರೀಯಾವಾಗಲು ನಿರ್ಧರಿಸಿದ್ದಾರೆ.

