LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಬಿಜೆಪಿಯಲ್ಲೂ ಇದೆ ಸಿಡಿ ಫ್ಯಾಕ್ಟರಿ, ಸದ್ಯದಲ್ಲೇ ಹೊರ ಬರುತ್ತೆ: ಯತ್ನಾಳ್ 

Advertisement

ನವದೆಹಲಿ :  ಕರ್ನಾಟಕ ರಾಜಕೀಯದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ ಸಂಬಂಧಿತ ಚರ್ಚೆ ಜೋರಾಗಿರುವ ಸಂದರ್ಭದಲ್ಲೇ ಮತ್ತೊಂದು ಸ್ಫೋಟಕ ಆರೋಪ ಕೇಳಿಬಂದಿದೆ. 'ಬಿಜೆಪಿಯಲ್ಲೂ ಸಿಡಿ ಫ್ಯಾಕ್ಟರಿ ಇದೆ. ಅಲ್ಲಿಯೂ ಕೆಲವು ಸ್ಟಿಂಗ್ ಆಪರೇಷನ್‌ಗಳು ನಡೆದಿವೆ.

ಆ ಸಿಡಿಗಳು ಯಾವಾಗ ಹೊರಬರುತ್ತವೆ ಎಂಬುದನ್ನು ನೋಡಬೇಕು' ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ನವದೆಹಲಿಯಲ್ಲಿ ಮಾತನಾಡಿದ ಯತ್ನಾಳ್, ಕರ್ನಾಟಕದಲ್ಲಿ ಎರಡು ಸಿಡಿ ಫ್ಯಾಕ್ಟರಿಗಳಿವೆ ಎಂದು ತಾವು ಬಹಳ ಹಿಂದೆಯೇ ಹೇಳಿದ್ದಾಗಿ ತಿಳಿಸಿದರು.

ಒಂದು ಸಿಡಿ ಫ್ಯಾಕ್ಟರಿ ಯಾವುದು ಎಂಬುದು ಎಲ್ಲರಿಗೂ ಗೊತ್ತಾಗಿದೆ ಎಂದ ಅವರು, ಮತ್ತೊಂದು ಫ್ಯಾಕ್ಟರಿ ಬಿಜೆಪಿಯಲ್ಲೂ ಇದೆ ಎಂದು ಆರೋಪಿಸಿದರು. ರಾಜಕೀಯ ಎದುರಾಳಿಗಳು ಹಾಗೂ ಭವಿಷ್ಯದಲ್ಲಿ ತಮಗೆ ಅಡ್ಡಿಯಾಗಬಹುದು ಎಂದು ಭಾವಿಸುವವರನ್ನು ಬ್ಲ್ಯಾಕ್‌ಮೇಲ್ ಮಾಡಲು ಇಂತಹ ವಿಡಿಯೋಗಳನ್ನು ಬಳಸಲಾಗುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದರು.

ಕರ್ನಾಟಕದಲ್ಲಿ ಸಿಡಿ ಮತ್ತು ಸ್ಟಿಂಗ್ ಆಪರೇಷನ್‌ಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್ ಮಾಡುವುದು ಒಂದು ವ್ಯವಹಾರವಾಗಿ ಬೆಳೆದಿದೆ. ರಾಜಕೀಯಕ್ಕೆ ಯಾವುದೋ ನೆಪದಲ್ಲಿ ಪ್ರವೇಶಿಸಿ, ವಿಡಿಯೋಗಳನ್ನು ಮಾಡಿಕೊಂಡು ಹಣಕ್ಕಾಗಿ ಶಾಸಕರನ್ನೇ ಬ್ಲ್ಯಾಕ್‌ಮೇಲ್ ಮಾಡುವ ತಂಡಗಳು ಬೆಂಗಳೂರಿನಲ್ಲಿ ಸಾಕಷ್ಟಿವೆ ಎಂದು ಯತ್ನಾಳ್ ಆರೋಪಿಸಿದರು.

ಸಿಡಿ ಪ್ರಕರಣದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡುತ್ತಿಲ್ಲ: ಯತ್ನಾಳ್

ಸ್ಟಿಂಗ್ ಆಪರೇಷನ್ ಪ್ರಕರಣದ ವಿಚಾರವಾಗಿ ಬಿಜೆಪಿ ರಾಜ್ಯಾಧ್ಯಕ್ಷರು ಮಾತನಾಡುತ್ತಿಲ್ಲ yಯಾಕೆ ಎಂದು ಪ್ರಶ್ನಿಸಿದ ಯತ್ನಾಳ್, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಈ ವಿಚಾರವಾಗಿ ನಿರಂತರವಾಗಿ ವಾಗ್ದಾಳಿ ನಡೆಸುತ್ತಿದ್ದಾರೆ.

ಕೆಪಿಸಿಸಿ ಮಾಜಿ ಅಧ್ಯಕ್ಷ ಹಾಗೂ ಹಾಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೆಸರನ್ನೂ ಈ ವಿಚಾರದಲ್ಲಿ ನೇರವಾಗಿ ಪ್ರಸ್ತಾಪಿಸಿದ್ದಾರೆ ಎಂದು ಹೇಳಿದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST