Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಾಗಲಕೋಟೆ ನಗರದಲ್ಲಿ ನರೇಂದ್ರ ಮೋದಿ 12 ವರ್ಷ ಪೂರೈಸಿದಕ್ಕೆ ಬಿಜೆಪಿ ನಾಯಕರು ವಿವಿಧಡೆ ವಿಶೇಷ ಪೂಜೆ   

Advertisement

ಕಲಾದಗಿ : ನರೇಂದ್ರ ಮೋದಿ ಪ್ರಧಾನಮಂತ್ರಿಯಾಗಿ 12 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಬುಧವಾರ ಬಾಗಲಕೋಟೆ ಜಿಲ್ಲೆಯ ಬಿಜೆಪಿ ನಾಯಕರು ನಗರದಲ್ಲಿ ವಿವಿಧಡೆ ವಿಶೇಷ ಪೂಜೆಗಳನ್ನು ಸಲ್ಲಿಸಿದರು.    

ಹೌದು ಬಾಗಲಕೋಟೆ ನಗರದ ವಿವಿಧ ದೇವಸ್ಥಾನಗಳಲ್ಲಿ ಭಾರತೀಯ ಜನತಾ ಪಕ್ಷದ ನಾಯಕರು ಹಾಗೂ ಚುನಾಯಿತ ಪ್ರತಿನಿಧಿಗಳಿಂದ ಸಮೀಪದ ಮುಚಖಂಡಿ ಶ್ರೀ ವೀರಭದ್ರೇಶ್ವರ ದೇವಸ್ಥಾನ ದಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ನೆರವೇರಿಸಿ ಮಾತನಾಡಿದ ಸಂಸದ ಪಿ ಸಿ ಗದ್ದಿಗೌಡರ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯಕ್ಕಾಗಿ ದೇವರಲ್ಲಿ ಪ್ರಾರ್ಥಿಸಿದ್ದೇವೆ. ಇತಿಹಾಸದಲ್ಲಿ ಅತಿ ಹೆಚ್ಚು ಅವರಿಗೆ ಚುನಾಯಿತ ಪ್ರಧಾನಮಂತ್ರಿಯಾಗಿರುವ ನರೇಂದ್ರ ಮೋದಿ ಸತತ ಮೂರನೇ ಅವಧಿಗೂ ದೇಶದ ಸೇವೆ ಸಲ್ಲಿಸುತ್ತಿದ್ದು, ಭಾರತವನ್ನು ಜಾಗತಿಕ ಮಟ್ಟದಲ್ಲಿ ಗುರಿತಿಸುವಂತೆ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದಾರೆ, ದೇಶದ ಕಲ್ಯಾಣ ಹಾಗೂ ಅಭಿವೃದ್ಧಿಗೆ ಅವರ ನಾಯಕತ್ವ ಮಹತ್ವದ ಪಾತ್ರ ವಹಿಸಿದ್ದು ಇಡೀ ವಿಶ್ವವೇ ಇಂದು ಭಾರತವನ್ನು ನೋಡುವಂತಾಗಿದೆ ಎಂದು ತಿಳಿಸಿದರು. 
news_1781086885_0_726.webp

 

ಈ ಸಂದರ್ಭದಲ್ಲಿ ಮಾಜಿ ಶಾಸಕ ವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣಸಾಬ ಭಾಂಡೆಗೆ ಸೇರಿದಂತೆ ಭಾರತೀಯ ಜನತಾ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.    

ವರದಿ : ಬಸವರಾಜ ಪೂಜಾರಿ

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST