Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯ ರಾಜಕಾರಣಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ನಿವೃತ್ತಿ ಘೋಷಣೆ

Advertisement

ಬೆಂಗಳೂರು: ಕರ್ನಾಟಕ ರಾಜಕೀಯದ ಹಿರಿಯ ಮುತ್ಸದ್ದಿ ಹಾಗೂ 'ಹಳ್ಳಿಹಕ್ಕಿ' ಎಂದೇ ಖ್ಯಾತರಾಗಿರುವ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ದೀರ್ಘಕಾಲದ ರಾಜಕೀಯ ಪಯಣದ ಮಹತ್ವದ ನಿರ್ಧಾರವನ್ನು ಪ್ರಕಟಿಸಿದರು. 

.ಮುಂಬರುವ ಯಾವುದೇ ರೀತಿಯ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ ವಿಶ್ವನಾಥ್, ಈ ಮೂಲಕ ಸಕ್ರಿಯ ಚುನಾವಣಾ ರಾಜಕಾರಣದಿಂದ ಹಿಂದೆ ಸರಿಯುವ ನಿರ್ಧಾರ ಕೈಗೊಂಡಿದ್ದಾರೆ.

ರಾಜ್ಯ ರಾಜಕಾರಣದ ವಿವಿಧ ಹಂತಗಳಲ್ಲಿ ಪ್ರಭಾವಶಾಲಿ ನಾಯಕರಾಗಿ ಗುರುತಿಸಿಕೊಂಡಿದ್ದ ಅವರು, ಈಗ ಚುನಾವಣಾ ಪಯಣಕ್ಕೆ ತೆರೆ ಎಳೆದಿದ್ದಾರೆ.

ನಿವೃತ್ತಿ ಘೋಷಣೆಯ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ವಿಶ್ವನಾಥ್ ತೀವ್ರ ವಾಗ್ದಾಳಿ ನಡೆಸಿದರು. ಪೋಕ್ಸೋ ಪ್ರಕರಣ ಮತ್ತು ಈ ಸಮಯದಲ್ಲಿ ನಡೆಯುತ್ತಿರುವ ಸನ್ಮಾನಗಳು ರಾಜ್ಯದ ಘನತೆಗೆ ಕಪ್ಪುಚುಕ್ಕೆಯಾಗಿ ಪರಿಣಮಿಸಿವೆ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಸರ್ಕಾರದ ನಡೆಯನ್ನು ಟೀಕಿಸಿದ ಅವರು, "ಸ್ವತಃ ವಕೀಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇದೆಲ್ಲಾ ತಿಳಿಯುತ್ತಿಲ್ಲವೇ?" ಎಂದು ಕಿಡಿ ಕಾರಿದರು.

ಬಿಎಸ್‌ವೈ ಅವರ 'ಅಭಿಮಾನೋತ್ಸವ' ಆಚರಣೆಯ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಅವರು, "ಪೋಕ್ಸೋ (POCSO) ನಂತಹ ಗಂಭೀರ ಪ್ರಕರಣದ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲಿ ಅಭಿಮಾನೋತ್ಸವ ಮಾಡುವುದು ಎಷ್ಟು ಸರಿ?" ಎಂದು ಪ್ರಶ್ನಿಸಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಮತಾ ಕ್ಯಾಬಿನೆಟ್ ವಿಸರ್ಜಿಸಿದ ರಾಜ್ಯಪಾಲರುದೀದಿಗೆ ಶಾಕ್ : ಪಶ್ಚಿಮ ಬಂಗಾಳ ರಾಜ್ಯಪಾಲರಿಂದ ವಿಧಾನಸಭೆಯನ್ನು ವಿಸರ್ಜನೆ ಮೇ 10 ರಂದು ಹೆಗ್ಗೆರೆಯಲ್ಲಿ ಲಯನ್ಸ್ ಇಂದ ಉಚಿತ ಆರೋಗ್ಯ ತಪಾಸಣಾ ಶಿಬಿರ26 ವರ್ಷದ ಯುವತಿ ಜೊತೆಗಿನ ಪ್ರೀತಿಗೆ ಮನೆಯವರ ವಿರೋಧ : 15 ವರ್ಷದ ಬಾಲಕ ಆತ್ಮಹತ್ಯೆರಾಜ್ಯ ರಾಜಕಾರಣಕ್ಕೆ ಬಿಜೆಪಿ ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ್ ನಿವೃತ್ತಿ ಘೋಷಣೆಪಾಕ್- ಬಾಂಗ್ಲಾ ಮೊದಲ ಟೆಸ್ಟ್ ನಾಳೆಯಿಂದ ಆರಂಭ​ಬೆಳಗಾವಿಯಲ್ಲಿ ಜಾಗತಿಕ ಮಟ್ಟದ ‘KC GlobEd’ ಕೇಂದ್ರ ಉದ್ಘಾಟನೆ: ಅಂತರಾಷ್ಟ್ರೀಯ ಶಿಕ್ಷಣಕ್ಕೆ ಹೊಸ ದಾರಿನೀರಿಗಾಗಿ ಪ್ರಾಣಿಗಳ ಪರದಾಟ : ಮಂಗಗಳ ಸಂಕಟ ದೃಶ್ಯ ವೈರಲ್118 ಶಾಸಕರ ಸಹಿಯೊಂದಿಗೆ ಬನ್ನಿ : 2ನೇ ದಿನವೂ ವಿಜಯ್ ರನ್ನು ವಾಪಸ್ ಕಳುಹಿಸಿದ ರಾಜ್ಯಪಾಲರುಇಂದು ಆರ್‌ಸಿಬಿ-ಎಲ್‌ಎಸ್‌ಜಿ ಪಂದ್ಯ