ರಾಯಚೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಆಡಳಿತ ವೈಫಲ್ಯ, ಭ್ರಷ್ಟಾಚಾರ ಹಾಗೂ ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಖಂಡಿಸಿ ಬಿಜೆಪಿ ಹಮ್ಮಿಕೊಂಡಿರುವ ಬೃಹತ್ 'ಬಳ್ಳಾರಿ ಚಲೋ'ಪಾದಯಾತ್ರೆಯು ಯಶಸ್ವಿಯಾಗಿ 3ನೇ ದಿನಕ್ಕೆ ಕಾಲಿಟ್ಟಿದೆ.
ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ತನ್ನ ಹೋರಾಟವನ್ನು ತೀವ್ರಗೊಳಿಸಿದ್ದು, ಸಾವಿರಾರು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಸಾಗುತ್ತಿದ್ದಾರೆ.
ಪಾದಯಾತ್ರೆಯು ಇಂದು ಬೆಳಿಗ್ಗೆ ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಗುಡುದೂರು ಗ್ರಾಮದಿಂದ ಪುನಃ ಆರಂಭಗೊಂಡಿದೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಜೆಪಿ ತನ್ನ ಶಕ್ತಿ ಪ್ರದರ್ಶನ ನಡೆಸುತ್ತಿದ್ದು, ಇಂದಿನ ಯಾತ್ರೆಯು ಪ್ರಮುಖವಾಗಿ ಸಿಂಧನೂರಿನತ್ತ ಪಯಣ ಬೆಳೆಸಲಿದೆ. ರಸ್ತೆಯುದ್ದಕ್ಕೂ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಸಾಥ್ ನೀಡುತ್ತಿದ್ದಾರೆ.


