ಬೆಂಗಳೂರು ಗ್ರಾಮಾಂತರ : ವಸತಿ ಶಾಲೆಯಲ್ಲಿ ನಡೆದ ರಾಗಿಂಗ್ (Ragging) ಪ್ರಕರಣವೊಂದು ಹೊರಬಿದ್ದಿದ್ದು, ಬೆಲ್ಟ್ ನಿಂದ ವಿದ್ಯಾರ್ಥಿಗಳ ಮೇಲೆ ಗುಂಪು ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ.
9 ವಿದ್ಯಾರ್ಥಿಗಳ ಮೇಲೆ 11 ವಿದ್ಯಾರ್ಥಿಗಳಿಂದ ಮನಬಂದಂತೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು, ಈ ಘಟನೆ ಪೋಷಕರಲ್ಲಿ ಆತಂಕ ಹುಟ್ಟುಹಾಕಿದೆ.
ದೇವನಹಳ್ಳಿ (Devanahalli) ತಾಲ್ಲೂಕಿನ, ಕುಂದಾಣ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ (Moraji desai hostel) ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡ್ತಿದ್ದ ವಿದ್ಯಾರ್ಥಿಗಳಿಂದಲೇ ಮತ್ತೊಂದು ಗುಂಪಿನ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಹಲ್ಲೆಗೊಳಗಾದ ಪೋಷಕರು ವಸತಿ ಶಾಲೆ ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥರ ವಿರುದ್ದ ಕಠಿಣ ಕ್ರಮಕ್ಕೆ ಆಗ್ರಹಿಸಿದ್ದಾರೆ.

