ಗೋವಾ: ಸಂಭವಿಸಿದ ದೋಣಿ ದುರಂತ ಅತ್ಯಂತ ಹೃದಯವಿದ್ರಾವಕವಾಗಿದೆ. 23 ಮೃತದೇಹಗಳನ್ನು ಪತ್ತೆಹಚ್ಚಲಾಗಿದ್ದು, 40 ಜನರನ್ನು ರಕ್ಷಿಸಲಾಗಿದೆ. ಇನ್ನೂ 64 ಜನರು ನಾಪತ್ತೆಯಾಗಿದ್ದಾರೆ.
ದೋಣಿ ಮಾಲೀಕರ ಅತಿಯಾದ ಲಾಭದಾಸೆಯಿಂದ ಸಾಮರ್ಥ್ಯಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿಕೊಂಡಿರುವುದು ಹಾಗೂ ಪ್ರಯಾಣಿಕರ ಅತಿಯಾದ ಆತ್ಮವಿಶ್ವಾಸವೂ ಈ ದುರಂತಕ್ಕೆ ಕಾರಣವಾಗಿರಬಹುದು. ಅಮೂಲ್ಯ ಜೀವಗಳನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದು ಪ್ರಾರ್ಥಿಸೋಣ.
ಒಂದು ಕ್ಷಣದ ನಿರ್ಲಕ್ಷ್ಯ ಮತ್ತು ಲಾಭದಾಸೆ, ಅನೇಕ ಕುಟುಂಬಗಳ ಬದುಕನ್ನೇ ಕತ್ತಲೆಗೆ ತಳ್ಳಿದೆ.

