Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ

Advertisement

ಧಾರವಾಡ: ಧಾರವಾಡ, ಕೋಲಾರ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯ ಆವರಣದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಯಿತು.

ಬೆದರಿಕೆ ಮಾಹಿತಿ ಸಿಗುತ್ತಿದ್ದಂತೆ ಪೊಲೀಸರು ಹಾಗೂ ಭದ್ರತಾ ಸಿಬ್ಬಂದಿ ಎಚ್ಚೆತ್ತುಕೊಂಡು ತಕ್ಷಣ ಶೋಧ ಕಾರ್ಯಾಚರಣೆ ಆರಂಭಿಸಿದರು.

ಧಾರವಾಡ ಮತ್ತು ಕೋಲಾರ ಜಿಲ್ಲಾ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಎರಡೂ ಕೋರ್ಟ್ ಸಂಕೀರ್ಣಗಳಲ್ಲಿ ಆತಂಕದ ವಾತಾವರಣ ನಿರ್ಮಾಣವಾಯಿತು.

ಮುನ್ನೆಚ್ಚರಿಕಾ ಕ್ರಮವಾಗಿ ವಕೀಲರು, ನ್ಯಾಯಾಲಯದ ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ತೆರಳುವಂತೆ ಸೂಚಿಸಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನದಳದಿಂದ ತಪಾಸಣೆ ನಡೆಸಲಾಯಿತು. ಬೆದರಿಕೆ ಕರೆ ಹಿನ್ನೆಲೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮುನ್ನೆಚ್ಚರಿಕಾ ಕ್ರಮವಾಗಿ ನ್ಯಾಯಾಲಯದ ಒಳಗಿದ್ದ ವಕೀಲರು, ಸಿಬ್ಬಂದಿ ಹಾಗೂ ಸಾರ್ವಜನಿಕರನ್ನು ಹೊರಗೆ ಕಳುಹಿಸಲಾಯಿತು. ನ್ಯಾಯಾಲಯದ ಆವರಣವನ್ನು ಸಂಪೂರ್ಣವಾಗಿ ಖಾಲಿ ಮಾಡಲಾಗಿದ್ದು, ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳದಿಂದ ತಪಾಸಣೆ ನಡೆಸಲಾಯಿತು.

ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ನ್ಯಾಯಾಲಯದ ಕಾರ್ಯಚಟುವಟಿಕೆಗಳಲ್ಲಿ ತಾತ್ಕಾಲಿಕ ವ್ಯತ್ಯಯ ಉಂಟಾಯಿತು.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆದರಿಕೆಯ ಮೂಲದ ಕುರಿತು ತನಿಖೆ ಕೈಗೊಂಡಿದ್ದಾರೆ.

ಪ್ರಾಥಮಿಕ ಮಾಹಿತಿಯ ಪ್ರಕಾರ, ಇದು ಹುಸಿ ಬೆದರಿಕೆ ಆಗಿರುವ ಸಾಧ್ಯತೆಯನ್ನೂ ಪೊಲೀಸರು ಪರಿಶೀಲಿಸುತ್ತಿದ್ದಾರೆ.

ಸಂಪೂರ್ಣ ತಪಾಸಣೆ ಬಳಿಕವೇ ನ್ಯಾಯಾಲಯದ ಕಾರ್ಯಾಚರಣೆ ಪುನರಾರಂಭಿಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಾನಂದ ಕಾಶಪ್ಪನವರ ಮೊದಲ ಬಾರಿಗೆ ಸಚಿವ ಸ್ಥಾನಕೈತಪ್ಪಿದ ಮಂತ್ರಿ ಸ್ಥಾನ : ಹೆಬ್ಬಾಳ್ಕರ್ ಬೆಂಬಲಿಗರಿಂದ ರಸ್ತೆ ತಡೆದು ಪ್ರತಿಭಟನೆ 2004 ಹಾಗೂ 2013ರಲ್ಲಿ ನನಗೆ ಮಂತ್ರಿಗಿರಿ ತಪ್ಪಿತು, ತಾಳ್ಮೆಯಿಂದ ಇರಿ : ಡಿ.ಕೆ.ಶಿವಕುಮಾರ್ ವಾರ್ಡ್ ನಂ 16 ರಲ್ಲಿನ ರಾಜಕಾಲುವೆ ಒತ್ತುವರಿ ತೆರವುಗೊಳಿಸುವಂತೆ ಮನವಿಎಸ್.ಐ.ಆರ್. ನಿರ್ಲಕ್ಷಿಸಿದರೆ ಜನಪ್ರತಿನಿಧಿಗಳ ಅಸ್ತಿತ್ವಕ್ಕೆ ಧಕ್ಕೆ : ಮುರಳೀಧರ ಹಾಲಪ್ಪವಿಧಾನಸಭೆ ಸ್ಪೀಕರ್ ಆಗಿ ಜಿ.ಎಸ್. ಪಾಟೀಲ್,ವಿಧಾನ ಪರಿಷತ್ ಉಪಸಭಾಪತಿ ಉಮಾಶ್ರೀಗೆ ಲಕ್ ಹೊಸಬರಿಗೆ ಜಾಕ್‌ಪಾಟ್ : ಸಿದ್ದರಾಮಯ್ಯ ಸಂಪುಟದಲ್ಲಿದ್ದ 14 ಜನ್ ಔಟ್ ಹೈಕಮಾಂಡ್‌ನಿಂದ ನೂತನ ಸಚಿವರ ಅಂತಿಮ ಪಟ್ಟಿ ಬಿಡುಗಡೆ : ಹೆಬ್ಬಾಳ್ಕರ್ ಔಟ್ , ಸವದಿ ಇನ್ ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆ