Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ : ಬೊಮ್ಮಾಯಿ

Advertisement

ಗದಗ: ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಎಂದು ಸಂವಿಧಾನದಲ್ಲಿ ಸ್ಪಷ್ಟವಾಗಿದೆ. ಹೀಗಿದ್ದರೂ ಕಾಂಗ್ರೆಸ್ ತುಷ್ಟೀಕರಣದ ರಾಜಕಾರಣಕ್ಕೆ ಮುಸ್ಲೀಮರ ಮೀಸಲಾತಿಗೆ ಬೆಂಬಲ ಕೊಡುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಗದಗ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ಇಲ್ಲ ಅಂತಾ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಆಕ್ಷೇಪದ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮುಸ್ಲೀಮರಲ್ಲೂ ಚಪ್ಪರಬಂದ್, ನದಾಫ್, ಪಿಂಜಾರ್ ಸೇರಿದಂತೆ 24 ಜಾತಿಯವರು ಬಹಳ ಹಿಂದುಳಿದವರಿದ್ದಾರೆ.


ಅವುಗಳಿಗೆ ಈಗಾಗಲೇ 2ಎ ಯಲ್ಲಿ‌ ಮೀಸಲಾತಿ ಇದೆ. ಅವರಿಗೆ ಹೆಚ್ಚುವರಿಯಾಗಿ ಶೇ 4 ಪರ್ಸೆಂಟ್ ಮೀಸಲಾತಿ ಕೊಟ್ಟಿದ್ದರು. ಅದನ್ನೇ ಹಿಂದುಳಿದ ವರ್ಗಗಳ ಆಯೋಗ ಆಕ್ಷೇಪ ಮಾಡಿದೆ. ಈಗ ಆ ಕೇಸ್ ಸುಪ್ರೀಂ ಕೋರ್ಟಿನಲ್ಲಿದೆ ನೋಡೋಣ ಎಂದರು.


ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆಸ್ತಿ ಮರು ಹಂಚಿಕೆ ಮಾಡುತ್ತಾರೆ ಎನ್ನುವ ಮಾತಿಗೆ ಪ್ರತಿಕ್ರಿಯಿಸಿದ ಅವರು, ಆಸ್ತಿ ಕೇಳುವುದಕ್ಕೆ ಬಹಳ ಚನ್ನಾಗಿ ಅನಿಸುತ್ತದೆ.


ಆದರೆ, ಯಾರದ್ದು ಕಿತ್ತುಕೊಂಡು ಯಾರಿಗೆ ಕೊಡುತ್ತಾರೆ ? ಏನ್ ಸರ್ವೆ ಮಾಡುತ್ತಾರೆ. ಚುನಾವಣೆ ಸಂದರ್ಭದಲ್ಕಿ ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡಬಾರದು. ಕಾಂಗ್ರೆಸ್ ನೀತಿ ಇದ್ದಲ್ಲಿ‌ ಸ್ಪಷ್ಟವಾಗಿ ಹೇಳಬೇಕು.


ಸಂವಿಧಾನದಲ್ಲಿ ವಾಕ್ ಸ್ವಾತಂತ್ರದ ಹಾಗೆ ಆಸ್ತಿ ಮಾಡುವ ಹಕ್ಕೂ ಇದೆ. ಕಾಂಗ್ರೆಸ್ ನವರು ಸಂವಧಾನದ ವಿರುದ್ಧ ಕೆಲಸ ಮಾಡಿತ್ತಿದ್ದಾರೆ. ಜವಾಬ್ದಾರಿ ಸ್ಥಾನದಲ್ಲಿ ಇದ್ದವರು ಹೀಗೆ ಮಾತ್ನಾಡಬಾರದು ಎಂದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ