Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟ ಮುಷ್ಕರಕ್ಕೆ ಬಿಎಸ್ಪಿ ಪಕ್ಷ ಬೆಂಬಲ.

Advertisement
ಸೇಡಂ : ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ವತಿಯಿಂದ ದಿ.22-09-2024 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಭಾ ಭವನ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧ್ಯಕ್ಷರು, ಪದಾಧಿಕಾರಿಗಳು, ತಾಲ್ಲೂಕು ಅಧ್ಯಕ್ಷರು, ಹಾಗೂ ಸರ್ವ ಸದಸ್ಯರ ಒಪ್ಪಿಗೆಯಂತೆ ಸರ್ವಾನುಮತದಿಂದ ದಿನಾಂಕ:26-09-2024 ರಿಂದ 03-10-2024 ರವರೆಗೆ ರಾಜ್ಯಾದ್ಯಂತ ಮುಷ್ಕರ ನಡೆಸಿದ ಕಾರಣ ದಿ.03-10-2024 ರಂದು ಮಾನ್ಯ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಭರವಸೆ ನೀಡಿರುತ್ತಾರೆ.

ಅದರಂತೆ ಸದರಿ ದಿನದಿಂದಲೇ ರಾಜ್ಯವ್ಯಾಪಿ ಮುಷ್ಕರವನ್ನು ಹಿಂಪಡೆಯಲಾಗಿರುತ್ತದೆ. ತದನಂತರ ಸರ್ಕಾರವು ಈ ವೃಂದದ ಬೇಡಿಕೆಗಳ ವಿಚಾರವಾಗಿ ಯಾವುದೇ ತೃಪ್ತಿಕರ ಕ್ರಮಗಳನ್ನು ಕೈಗೊಂಡಿರುವುದಿಲ್ಲ ಮತ್ತು ಬೇಡಿಕೆಗಳನ್ನು ಈಡೇರಿಸಿರುವುದಿಲ್ಲ ಬದಲಾಗಿ ಮುಷ್ಕರದ ಪೂರ್ವದ ಅವಧಿಗಿಂತಲೂ ಹೆಚ್ಚಿನ ಕಾರ್ಯದ ಒತ್ತಡ ಉಂಟಾಗಿರುತ್ತದೆ. ಆದ್ದರಿಂದ ಉಲ್ಲೇಖದ ಸಭೆಯಲ್ಲಿ ಮೇಲ್ಕಂಡ ಎಲ್ಲಾ ಕಾರಣಗಳಿಗಾಗಿ ಮುಷ್ಕರದ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯವ್ಯಾಪ್ತಿ ಅನಿರ್ಧಿಷ್ಟಾವಧಿಗೆ ఎల్లా ಕೆಲಸಗಳನ್ನು ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಲಾಗಿರುತ್ತದೆ.

ಈ ಕುರಿತು ಸೇಡಂ ನಲ್ಲಿ ಹಮ್ಮಿಕೊಂಡಿರುವ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟ ಮುಷ್ಕರಕೆ ಸೇಡಂ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷ ಸಂಪೂರ್ಣ ಬೆಂಬಲ ನೀಡಿತು.

ಈ ಸಂದರ್ಭದಲ್ಲಿ ಬಹುಜನ ಸಮಾಜ ಪಕ್ಷದ ತಾಲೂಕ ಅಧ್ಯಕ್ಷರಾದ ರೇವಣ ಸಿದ್ಧ ಎಸ್ ಶಿಂದೆ ಮಾತನಾಡಿ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ದಿಷ್ಟ ಮುಷ್ಕರಕ್ಕೆ ನಮ್ಮ ಸಂಪೂರ್ಣ ಬೆಂಬಲವಿರುತ್ತದೆ ಅವರ ವಿವಿಧ ಬೇಡಿಕೆಗಳನ್ನು ಕೂಡಲೇ ಈಡೇರಿಸಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಪರವಾಗಿ ನಮ್ಮ ಪಕ್ಷದ ವತಿಯಿಂದ ದೊಡ್ಡ ಪ್ರಮಾಣದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ಮಾತನಾಡಿದರು.

ಈ ಸಂದರ್ಬದಲ್ಲಿ ರೇವಣಸಿದ್ಧಪ್ಪ ಎಸ್ ಸಿಂಧೆ, ಸಿದ್ದು ದೊರೆ, ರಾಕೇಶ, ರಮೇಶ್, ಶಿವು ಗೋಪಾನಪಲ್ಲಿ, ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು ಮತ್ತು ಸದಸ್ಯರು ಗ್ರಾಮ ಆಡಳಿತ ಅಧಿಕಾರಿಗಳು ಭಾಗಿಯಾಗಿದ್ದರು.

ವರದಿ : ವೆಂಕಟಪ್ಪ ಕೆ ಸುಗ್ಗಾಲ್.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ