ಹುಬ್ಬಳ್ಳಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ರಾಜಕೀಯ ಜೀವನದಲ್ಲಿ ಸಾರ್ಥಕ ೫೦ ವರ್ಷಗಳನ್ನು ಪೂರೈಸಿದ ಹಿನ್ನಲೆ ಮೇ ೯ರಂದು ಚಿತ್ರದುರ್ಗದಲ್ಲಿ 'ಬಿಎಸ್‌ವೈ ಅಭಿಮಾನೋತ್ಸವ' ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಶಾಸಕ ಮಹೇಶ್ ಟೆಂಗಿನಕಾಯಿ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಬಿಜೆಪಿಯನ್ನು ಕಟ್ಟಿ ಬೆಳೆಸುವಲ್ಲಿ ಸಾಕಷ್ಟು ಶ್ರಮವಹಿಸಿದ್ದಾರೆ. ಅವರು ದೃಢ ಸಂಕಲ್ಪದೊAದಿಗೆ ಒಳ್ಳೆಯ ಕೆಲಸ ಮಾಡುವ ಮೂಲಕ ರೈತಪರವಾದಂತಹ ಕಾರ್ಯ ಮಾಡುವುದರ ಜೊತೆಗೆ ಮನೆ ಮಾತಾಗಿದ್ದಾರೆ.
ಈ ಪಕ್ಷಾತೀತ ಕಾರ್ಯಕ್ರಮಕ್ಕೆ ಕೇಂದ್ರ ಗೃಹ ಸಚಿವರಾದ ಅಮಿತ್ ಶಾ, ಕೇಂದ್ರದ ಸಚಿವರುಗಳು, ಸಂಸದರು ೫೦೦ ಕ್ಕೂ ಹೆಚ್ಚು ಮಠಾಧೀಶರುಗಳು, ಬೇರೆ ಬೇರೆ ಪಕ್ಷದ ಮುಖಂಡರುಗಳು ಆಗಮಿಸಲಿದ್ದಾರೆ ಎಂದು ತಿಳಿಸಿದ್ದಾರೆ. ಈ ಬೃಹತ್ ಕಾರ್ಯಕ್ರಮಕ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್, ಹುಧಾ ಮಹಾನಗರ ಬಿಜೆಪಿ ಜಿಲ್ಲಾ ಅಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಮುಖಂಡರಾದ ಜಯತೀರ್ಥ ಕಟ್ಟಿ, ಮಹೇಂದ್ರ ಕೌತಾಳ, ಲಿಂಗರಾಜ ಪಾಟೀಲ್ ಇತರರಿದ್ದರು.
ವರದಿ : ಸುಧೀರ್ ಕುಲಕರ್ಣಿ

