Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ಷಯ ತೃತೀಯ : ಕುಸಿದ ಚಿನ್ನ ಮತ್ತು ಬೆಳ್ಳಿ ಖರೀದಿ

Advertisement
ಬೆಂಗಳೂರು: ರಾಜ್ಯದಲ್ಲಿ ಈ ಬಾರಿಯ ಅಕ್ಷಯ ತೃತೀಯದಂದು ಚಿನ್ನ ಮತ್ತು ಬೆಳ್ಳಿಯ ಮಾರಾಟದಲ್ಲಿ ಗಣನೀಯ ಇಳಿಕೆ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ವ್ಯವಹಾರವು ಶೇ. 30 ರಿಂದ 35ರಷ್ಟು ಕಡಿಮೆಯಾಗಿದೆ ಎಂದು ಅಂದಾಜಿಸಲಾಗಿದೆ.

ರಾಜ್ಯಾದ್ಯಂತ ಎರಡು ದಿನಗಳಲ್ಲಿ ಒಟ್ಟು 1,250 ಚಿನ್ನ ಹಾಗೂ 10 ಟನ್ ಬೆಳ್ಳಿ ಮಾರಾಟವಾಗಿದೆ. ಸುಮಾರು ₹1,800 ರಿಂದ ₹2,000 ಕೋಟಿ ಮೌಲ್ಯದ ಚಿನ್ನ ಹಾಗೂ ₹800 ಕೋಟಿ ಮೌಲ್ಯದ ಬೆಳ್ಳಿಯನ್ನು ಗ್ರಾಹಕರು ಖರೀದಿಸಿದ್ದಾರೆ.

ರಾಜಧಾನಿ ಬೆಂಗಳೂರು ಒಂದರಲ್ಲೇ ಸುಮಾರು ₹800 ಕೋಟಿ ರೂಪಾಯಿಗಳ ವಹಿವಾಟು ನಡೆದಿದೆ. ನಗರದಲ್ಲಿ 4 ಟನ್ ಬೆಳ್ಳಿ ಮಾರಾಟವಾಗಿದ್ದರೆ, ಉಳಿದ 6 ಟನ್ ಬೆಳ್ಳಿ ರಾಜ್ಯದ ಇತರ ಭಾಗಗಳಲ್ಲಿ ಮಾರಾಟವಾಗಿದೆ.

ಜಾಗತಿಕ ಮಟ್ಟದ ಯುದ್ಧದ ಭೀತಿ ಅಥವಾ ಚಿನ್ನದ ದರ ವಿಪರೀತ ಏರಿಕೆಯಾಗಿರುವುದು ಈ ಇಳಿಕೆಗೆ ಕಾರಣವಾಗಿರಬಹುದು ಎಂದು ವಿಶ್ಲೇಷಿಸಲಾಗಿದೆ. ಕಳೆದ ವರ್ಷ ಇದೇ ಸಮಯದಲ್ಲಿ ಸುಮಾರು 1,600 ಕೆ.ಜಿ. ಚಿನ್ನ ಹಾಗೂ 15 ಟನ್ ಬೆಳ್ಳಿ ಮಾರಾಟವಾಗಿತ್ತು.

ಗ್ರಾಹಕರ ಒಲವು:

ಚಿನ್ನದ ಬೆಲೆ ಹೆಚ್ಚಾಗಿರುವುದರಿಂದ ಗ್ರಾಹಕರು ಕಡಿಮೆ ತೂಕದ ಆಭರಣಗಳಿಗೆ ಹೆಚ್ಚಿನ ಆಸಕ್ತಿ ತೋರಿಸಿದ್ದಾರೆ. ಸಾಮಾನ್ಯವಾಗಿ 10 ಗ್ರಾಂ ಚಿನ್ನ ಖರೀದಿಸುತ್ತಿದ್ದವರು, ಈ ಬಾರಿ ಕೇವಲ 1 ಗ್ರಾಂ ಚಿನ್ನ ಖರೀದಿಸಿ ಸಂಪ್ರದಾಯ ಪೂರೈಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್ ಬಿಜೆಪಿ ವಿರುದ್ಧ ಸೆಡ್ಡು : ಇಂದು 23 ರಾಜಕೀಯ ಪಕ್ಷಗಳಿಂದ ಇಂಡಿಯಾ ಮೈತ್ರಿಕೂಟದ ಸಭೆ ರೈತರಿಗೆ ವ್ಯಕ್ತಿಯಿಂದ ಕಳಪೆ ಬೀಜ ಮಾರಾಟ ಜಮೀರ್ ಅಹ್ಮದ್ ಖಾನ್ ವರಿಗೆ ಉಪಮುಖ್ಯಮಂತ್ರಿ, ಶಾಸಕ ಎಸ್.ಎನ್. ಸುಬ್ಬಾರೆಡ್ಡಿರವರಿಗೆ ಸಚಿವ ಸ್ಥಾನ ನೀಡುವಂತೆ  ಒತ್ತಾಯ