Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಪಚುನಾವಣೆ : ಎಚ್.ವೈ.ಮೇಟಿ ಕುಟುಂಬದವರ ಜೊತೆ ಸಿಎಂ ಸಭೆ 

Advertisement
ಬೆಂಗಳೂರು : ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆ ಏಪ್ರಿಲ್ 9ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23 ಕೊನೆಯ ದಿನವಾಗಿದೆ. ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದ ಎಚ್.ವೈ.ಮೇಟಿ ನಿಧನದ ಕಾರಣ ಉಪ ಚುಣಾವಣೆ ನಡೆಯುತ್ತಿದೆ.

ಉಪ ಚುನಾವಣೆಗೆ ಕಾಂಗ್ರೆಸ್ ಇನ್ನೂ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ.ಎಚ್.ವೈ.ಮೇಟಿ ಕುಟುಂಬದಲ್ಲಿಯೇ ಟಿಕೆಟ್‌ಗಾಗಿ ಭಾರೀ ಪೈಪೋಟಿ ಇದೆ. ಆದ್ದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ಸದಸ್ಯರನ್ನು ಭೇಟಿ ಮಾಡಿದರು.

ಈ ಕುರಿತು ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, 'ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ಸಂಬಂಧ ಇಂದು ದಿವಂಗತ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರೊಂದಿಗೆ ಸಮಾಲೋಚನೆ ನಡೆಸಿ, ಅವರ ಅಭಿಪ್ರಾಯಗಳನ್ನು ಆಲಿಸಿದೆ' ಎಂದು ಹೇಳಿದ್ದಾರೆ.

ಬೆಂಗಳೂರಿಗೆ ಬಂದು ಭೇಟಿಯಾಗುವಂತೆ ಸಿದ್ದರಾಮಯ್ಯ ಆಹ್ವಾನ ನೀಡಿದ್ದ ಹಿನ್ನಲೆಯಲ್ಲಿ ಬುಧವಾರ ಎಚ್.ವೈ. ಮೇಟಿ ಅವರ ಪುತ್ರರಾದ ಮಲ್ಲಿಕಾರ್ಜುನ, ಉಮೇಶ್, ಪುತ್ರಿಯರಾದ ಬಾಯಕ್ಕ ಮತ್ತು ಮಹಾದೇವಿ ಅವರು ಸಿದ್ದರಾಮಯ್ಯ ಭೇಟಿ ಮಾಡಿದ್ದಾರೆ.

ಎಚ್.ವೈ.ಮೇಟಿ ಪುತ್ರಿ ಮಹಾದೇವಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಮಾರ್ಚ್ 20ರ ಶುಕ್ರವಾರ ಬಾಗಲಕೋಟೆ ಉಪ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡುತ್ತೇನೆ ಎಂದು ಹೇಳಿದ್ದರು. ಆದ್ದರಿಂದ ಅಭ್ಯರ್ಥಿ ಘೋಷಣೆ ಕಾಂಗ್ರೆಸ್ ಪಾಲಿಗೆ ಕಗ್ಗಂಟಾಗಿತ್ತು.

ಕಳೆದ ಶನಿವಾರ ಬಾಗಲಕೋಟೆಯಲ್ಲಿ ಮಾತನಾಡಿದ್ದ ಸಿದ್ದರಾಮಯ್ಯ, 'ಬಾಗಲಕೋಟೆ ಮತ್ತು ದಾವಣಗೆರೆ ಉಪಚುನಾವಣೆ ಅಭ್ಯರ್ಥಿಗಳ ಆಯ್ಕೆಯನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೆಚ್.ವೈ ಮೇಟಿ ಕುಟುಂಬದವರೂ ಒಬ್ಬ ಟಿಕೇಟ್ ಆಕಾಂಕ್ಷಿಯಾಗಿದ್ದಾರೆ. ಉಪಚುನಾವಣೆ ಒಂದು ವಾರದೊಳಗೆ ಘೋಷಣೆಯಾಗಬಹುದು.

ಯಾರಾದರೂ ಆಕಾಂಕ್ಷಿಯಾಗಬಹುದು. ಒಂದೇ ಕುಟುಂಬದಿಂದ ಎಷ್ಟು ಜನ ಕೇಳಿದರೂ ಒಬ್ಬರಿಗೆ ಹೈಕಮಾಂಡ್ ಟಿಕೆಟ್ ನೀಡುವುದು. ಉಪಚುನಾವಣೆಗೆ ಎಲ್ಲಾ ತಯಾರಿ ನಡೆದಿದ್ದು, ನಾವು ಅದಕ್ಕೆ ಸಿದ್ಧರಿದ್ದೇವೆ" ಎಂದು ಹೇಳಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ