ಕಲಾದಗಿ : ನವೆಂಬರ್ 26 ರಂದು ದೇಶಾದ್ಯಂತ ಸಂವಿಧಾನ ಸಮರ್ಪಣಾ ಹಾಗೂ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ಮಹತ್ವದ ದಿನವನ್ನು ಆಚರಿಸಲಾಗುತ್ತದೆ ಈ ಪ್ರಯುಕ್ತ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ 'ಭೀಮ ಘರ್ಜನೆ' ಸಂಘಟನೆಯ ವತಿಯಿಂದಲೂ ಗುರುವಾರ ಸಾಯಂಕಾಲ ಸಂವಿಧಾನ ಸಮರ್ಪಣಾ ದಿನವನ್ನು ಆಚರಿಸುವ ಮೂಲಕ ಸಂವಿಧಾನದ ಮೌಲ್ಯಗಳು ಮತ್ತು ಡಾ ಬಿ ಆರ್ ಅಂಬೇಡ್ಕರ್ ಅವರ ಕೊಡುಗೆಯನ್ನು ಸ್ಮರಿಸುತ್ತ ಆಚರಿಸಿಲಾಯಿತು.
ಸಂವಿಧಾನ ಅಂಗೀಕಾರದ ಸ್ಮರಣೆ
1949ರ ನವೆಂಬರ್ 26ರಂದು ಸಂವಿಧಾನ ರಚನಾ ಸಭೆಯು ಭಾರತೀಯ ಸಂವಿಧಾನವನ್ನು ಅಧಿಕೃತವಾಗಿ ಅಂಗೀಕರಿಸಿ ದೇಶಕ್ಕೆ ಸಮರ್ಪಿಸಿತು ಈ ಐತಿಹಾಸಿಕ ಕ್ಷಣವನ್ನು ಗೌರವಿಸಲು ಪ್ರತಿ ವರ್ಷ ನವೆಂಬರ್ 26ರಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತದೆ.
ಡಾ ಬಿ ಆರ್ ಅಂಬೇಡ್ಕರ್ ಅವರಿಗೆ ಗೌರವ ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿ, ಸಮಾನತೆ ಮತ್ತು ಸಾಮಾಜಿಕ ನ್ಯಾಯದ ಆಶಯಗಳನ್ನೊಳಗೊಂಡ ವಿಶ್ವದ ಅತಿ ದೊಡ್ಡ ಲಿಖಿತ ಸಂವಿಧಾನವನ್ನು ನೀಡಿದ ಬಾಬಾಸಾಹೇಬ್ ಅಂಬೇಡ್ಕರ್ ಅವರ ದೂರದೃಷ್ಟಿ ಮತ್ತು ಶ್ರಮವನ್ನು ಈ ದಿನ ಸ್ಮರಿಸಲಾಗುತ್ತದೆ
ಸಾಂವಿಧಾನಿಕ ಮೌಲ್ಯಗಳ ಜಾಗೃತಿ
ಸಂವಿಧಾನದ ಪೀಠಿಕೆಯಲ್ಲಿರುವ ನ್ಯಾಯ, ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವದ ತತ್ವಗಳನ್ನು ಜನಸಾಮಾನ್ಯರಿಗೆ ತಲುಪಿಸುವುದು ಈ ಆಚರಣೆಯ ಮುಖ್ಯ ಉದ್ದೇಶವಾಗಿದೆ
ಹಕ್ಕು ಮತ್ತು ಕರ್ತವ್ಯಗಳ ಅರಿವು
ಪ್ರತಿಯೊಬ್ಬ ನಾಗರಿಕನಿಗೂ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಸಮಾನ ಅವಕಾಶಗಳು ಹಾಗೂ ದೇಶದ ಪ್ರಜೆಯಾಗಿ ಪಾಲಿಸಬೇಕಾದ ಮೂಲಭೂತ ಕರ್ತವ್ಯಗಳ ಬಗ್ಗೆ ಅರಿವು ಮೂಡಿಸಲು ಇಂತಹ ಕಾರ್ಯಕ್ರಮಗಳು ನೆರವಾಗುತ್ತವೆ.
ಪ್ರಜಾಪ್ರಭುತ್ವದ ರಕ್ಷಣೆ
ಜಾತಿ, ಧರ್ಮ ಮತ್ತು ಲಿಂಗ ತಾರತಮ್ಯವಿಲ್ಲದೆ ಎಲ್ಲರೂ ಘನತೆಯಿಂದ ಬದುಕಲು ಅವಕಾಶ ನೀಡಿರುವ ಸಂವಿಧಾನವನ್ನು ರಕ್ಷಿಸುವ ಮತ್ತು ಅದರ ಆಶಯಗಳನ್ನು ಎತ್ತಿಹಿಡಿಯುವ ಸಂಕಲ್ಪವನ್ನು ಈ ದಿನ ಮಾಡಲಾಗುತ್ತದೆ ಎಂದು ಹವಳಪ್ಪ ಮಾದರ ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಆನಂದ ಮಾದರ, ಸಮೀರ್ ಕೆ, ಈರಣ್ಣ ಬಿ, ಬಬಲು ಎಂ, ಲಕ್ಷ್ಮಣ ಮಾದರ, ಸಾಹಿಲ್ ಕೆ, ಮೊಹಮ್ಮದ್ ಕೆ, ಆಕಾಶ ಮದರ, ಗಂಗಪ್ಪ ಅಂಕಲಗಿ, ಭಾನು ಭಜಂತ್ರಿ, ಭೀಮ ಘರ್ಜನೆ ಸಂಘಟನೆಯ ಕಾರ್ಯಕರ್ತರು ಹಾಗೂ ಯುವ ಮಿತ್ರರು ಭಾಗವಹಿಸಿದ್ದರು.
ವರದಿ : ಬಸವರಾಜ ಪೂಜಾರಿ

