ಬೆಂಗಳೂರು: ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಭಿಯೋಜನೆಯಿಂದ ಪ್ರಕರಣಗಳನ್ನು ಹಿಂಪಡೆಯಲು ಒಪ್ಪಿಗೆ ಸೂಚಿಸಲಾಗಿದೆ.
ವಿಧಾನಸೌಧದಲ್ಲಿ ಸಂಪುಟ ಸಭೆಯ ಬಳಿಕ ಮಾಹಿತಿ ನೀಡಿದ ಕಾನೂನು ಸಚಿವ ಹೆಚ್.ಕೆ.ಪಾಟೀಲ್, 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಲಾಗಿದೆ. ರಾಜ್ಯದಲ್ಲಿ ಪ್ರಾರಂಭವಾಗಲಿರುವ ಎಸ್‌ಐಆರ್ ಕುರಿತಾಗಿ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.
ಬಂಗಾಳ ಸೇರಿದಂತೆ ಬೇರೆ ಭಾರಿ ರಾಜ್ಯಗಳಲ್ಲಿ ಗಂಭೀರ ಆಕ್ಷೇಪ ವ್ಯಕ್ತವಾಗಿದೆ. ತಮಿಳುನಾಡಿನ ಹಲವು ಆಕ್ಷೇಪಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ನಾಗರಿಕ ಮತದಾನದ ಹಕ್ಕು ಕಳೆದುಕೊಳ್ಳಬಾರದು ಎಂದು ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಹೋಬಳಿಯ ದಾಸನಕೆರೆ ಅಭಿವೃದ್ಧಿ ಹಾಗೂ ಅಭಿವೃದ್ಧಿ ಕಾಮಗಾರಿಗಳಿಗೆ ಸಂಪುಟ ಅನುಮೋದನೆ ನೀಡಿದೆ. 25 ಕೋಟಿ ರೂಪಾಯಿ ವೆಚ್ಚದಲ್ಲಿ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ.
ನಗರ ಪ್ರಾಥಮಿಕ ಮತ್ತು ನಗರ ಸಮುದಾಯ ಆರೋಗ್ಯ ಕೇಂದ್ರ, ನಮ್ಮ ಕ್ಲಿನಿಕ್ ಗಳಿಗೆ ಅವಶ್ಯಕತೆ ಇರುವ ಆರ್ ಡಿ ಕಿಟ್ ಗಳು ಖರೀದಿಗೆ ಒಪ್ಪಿಗೆ ನೀಡಲಾಗಿದೆ.

