Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ 

Advertisement
ಚಾಮರಾಜನಗರ : ರಾಜ್ಯ ರಾಜಕಾರಣದಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿರುವ ಜಾತಿ ಗಣತಿ ವರದಿ ವಿಚಾರವಾಗಿ ಚರ್ಚಿಸಲು ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟದಲ್ಲಿ ಇಂದು (ಏ.24) ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

ಈಗಾಗಲೇ ಜಿಲ್ಲಾಧಿಕಾರಿ ಶಿಲ್ಪಾನಾಗ್ ನೇತೃತ್ವದಲ್ಲಿ ಮಹದೇಶ್ವರ ಬೆಟ್ಟದಲ್ಲಿ‌ ಭರ್ಜರಿ ತಯಾರಿ ನಡೆಸಲಾಗಿದ್ದು, ಡಿಸಿ ಮತ್ತು ಹನೂರು ಶಾಸಕ ಎಂ.ಆರ್​.ಮಂಜುನಾಥ್​ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಾದಪ್ಪನ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು ಎಂದು ಸರ್ಕಾರ ಈ ಹಿಂದೆ ಮೂರು ಬಾರಿ ನಿರ್ಧರಿಸಿತ್ತು. ಕಾರಣಾಂತರಗಳಿಂದ ಮುಂದೂಡಲಾಗಿತ್ತು. ಇಂದು ಮಧ್ಯಾಹ್ನ 12 ಗಂಟೆಗೆ ಬೆಟ್ಟದ ದೀಪದ ಗಿರಿ ವಡ್ಡುವಿನಲ್ಲಿ ಕ್ಯಾಬಿನೆಟ್​​ ಮೀಟಿಂಗ್ ನಡೆಯಲಿದೆ.

ಸಭೆಯಲ್ಲಿ ಜಾತಿಗಣತಿ ವರದಿ ಕುರಿತಾಗಿ ಸಚಿವರ ಅಭಿಪ್ರಾಯಗಳನ್ನು ಸಿಎಂ ಪಡೆಯಲಿದ್ದು, ಮೇ.2ರಂದು ಅಂತಿಮವಾಗಿ ಈ ಬಗ್ಗೆ ನಿರ್ಧರಿಸಲು ಸರ್ಕಾರ ಸಜ್ಜಾಗಿದೆ. ಮಾದಪ್ಪನ ಬೆಟ್ಟದಲ್ಲಿ ನಡೆಯಲಿರುವ ಈ ಸಚಿವ ಸಂಪುಟ ಸಭೆಯಲ್ಲಿ ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು, ಚಿಕ್ಕಮಗಳೂರು, ಉಡುಪಿ, ಮಂಗಳೂರು ಮತ್ತು ಹಾಸನ ಜಿಲ್ಲೆಯ ಅಭಿವೃದ್ಧಿ ಕಾರ್ಯಗಳಿಗೆ ಕುರಿತಂತೆ ಮಹತ್ವದ ಪ್ರಸ್ತಾವನೆಗಳು ಚರ್ಚೆಗೆ ಬರಲಿವೆ ಎಂದು ತಿಳಿದುಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್