Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಇಂದು ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ 

Advertisement
ಕಲಬುರಗಿ: ಕಲ್ಯಾಣ ಕರ್ನಾಟಕದ ಭಾಗವಾದ ಕಲಬುರಗಿಯಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಸಲಾಗುತ್ತಿದ್ದು, ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು.

ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿನ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದರು.

371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್ ಸರ್ಕಾರ: ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು,, ಇದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿಮುಖ್ಯಮಂತ್ರಿ ಧರಂಸಿಂಗ್ ಅವರು ಶ್ರಮವಹಿಸಿದ್ದರು.

2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತರು ಬಿಜೆಪಿಯವರಲ್ಲ. ವಾಜಪೇಯಿಯವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಈ ಕಾನೂನನ್ನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದರು.

ಕಲ್ಯಾಣ ಕರ್ನಾಟಕಕ್ಕೆ 5000 ಕೋಟಿ ಅನುದಾನ: ಕಾಂಗ್ರೆಸ್ ಸರ್ಕಾರದ ಮೇಲೆ ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್