Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ನಾಮನಿರ್ದೇಶನಗಳ ಅಹ್ವಾನ

Advertisement
ಬೆಂಗಳೂರು:-ಅಕ್ಟೋಬರ್ 04 ,ಹಿರಿಯ ಪತ್ರಕರ್ತ ದಿ.ವಡ್ಡರ್ಸೆ ರಘುರಾಮ ಶೆಟ್ಟಿ ಅವರ ನೆನಪಿನಾರ್ಥ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದ್ದಾರೆ. ಪ್ರಶಸ್ತಿಯು 2 ಲಕ್ಷ ರೂಪಾಯಿ ನಗದು, ಸ್ಮರಣಿಕೆ ಒಳಗೊಂಡಿದೆ.



“ವಡ್ಡರ್ಸೆ ರಘುರಾಮ ಶೆಟ್ಟಿ” ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಹರನ್ನು ಆಯ್ಕೆ ಮಾಡಲು ಪತ್ರಕರ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಸಾರ್ವಜನಿಕರು, ಸಂಘ - ಸಂಸ್ಥೆಗಳು ಅರ್ಹ ಪತ್ರಕರ್ತರನ್ನು ಪ್ರಶಸ್ತಿಗೆ ನಾಮನಿರ್ದೇಶನ ಮಾಡಬಹುದಾಗಿದೆ.

ವಡ್ಡರ್ಸೆ ರಘುರಾಮಶೆಟ್ಟಿ ಅವರ ಪರಿಚಯ:-ಓದುಗರ ಸಂಪಾದಕ ಎಂದೇ ಹೆಸರಾಗಿದ್ದ ದಿ.ವಡ್ಡರ್ಸೆ ರಘುರಾಮ ಶೆಟ್ಟಿಯವರು. 1960ರ ದಶಕದಿಂದ ಸುಮಾರು ನಾಲ್ಕು ದಶಕಗಳ ಕಾಲ ಕನ್ನಡ ಪತ್ರಿಕೋದ್ಯಮದಲ್ಲಿ ಮಹತ್ವದ ಸೇವೆಗೈದಿದ್ದಾರೆ. ಮಾಧ್ಯಮವು ವಾಣಿಜ್ಯೋದ್ಯಮಿಗಳ ಹಾಗೂ ಈ ರಂಗದ ಪರಿಚಯವಿಲ್ಲದವರ ಆಡುಂಬೊಲವಾಗಬಾರದು ಎಂಬ ಮಹತ್ವಾಕಾಂಕ್ಷೆ ಹೊಂದಿದ್ದರು. ಸಮಾಜದ ವಂಚನೆಯ ಜಾಲಗಳನ್ನು ಬಯಲಿಗೆಳೆಯುವ ಉದ್ದೇಶದಿಂದ 1984 ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಿಂದ “ಮುಂಗಾರು” ದಿನಪತ್ರಿಕೆಯನ್ನು ಪ್ರಾರಂಭಿಸಿ, ನಿರ್ಭೀತ ಬರಹಗಳ ಮೂಲಕ ಪತ್ರಿಕಾ ವೃತ್ತಿಯಲ್ಲಿ ಬದಲಾವಣೆಯನ್ನು ತಂದವರು. ಕನ್ನಡ ಪತ್ರಿಕೋದ್ಯಮದಲ್ಲಿ ದೀನದಲಿತರ ಹಾಗೂ ದುರ್ಬಲ ವರ್ಗದವರ ಪರವಾಗಿ ಧ್ವನಿಯೆತ್ತುವ, ದನಿಯಿಲ್ಲದವರ ದನಿಯಾಗಿದ್ದರು. ಪಾರದರ್ಶಕ ಮತ್ತು ಜವಾಬ್ದಾರಿಯುತ ಆಡಳಿತವನ್ನು ಉತ್ತೇಜಿಸಲು ಮತ್ತು ಸಾಮಾಜಿಕ ಬದಲಾವಣೆಯನ್ನು ತರಲು ಶ್ರಮಿಸಿದರು.

ಪ್ರಶಸ್ತಿಗೆ ಅರ್ಹತೆಗಳು:-ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವಾನುಭವ ಹೊಂದಿರಬೇಕು. ಹಿರಿಯರಿಗೆ ಆದ್ಯತೆ ನೀಡಲಾಗುವುದು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10 ರಿಂದ 15 ಲೇಖನಗಳು ಪ್ರಕಟವಾಗಿರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರೆ ಕಾರ್ಯಕ್ರಮಗಳನ್ನು ನಿರ್ಮಿಸಿರಬೇಕು.

ನಾಮನಿರ್ದೇಶನಗಳನ್ನು ಸಲ್ಲಿಸಲು 2024ನೇ ಅಕ್ಟೋಬರ್ 21 ಕೊನೆಯ ದಿನಾಂಕವಾಗಿರುತ್ತದೆ.ನಾಮನಿರ್ದೇಶನಗಳನ್ನು ಆಯುಕ್ತರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಂ. 17, ವಾರ್ತಾಸೌಧ, ಭಗÀವಾನ್ ಮಹಾವೀರ ರಸ್ತೆ, (ಇನ್ ಫೆಂಟ್ರಿ ರಸ್ತೆ), ಬೆಂಗಳೂರು 560 001 ಇಲ್ಲಿಗೆ ಖುದ್ದಾಗಿ ಅಥವಾ ಅಂಚೆ ಮೂಲಕ ಅಥವಾ [email protected] ಇ-ಮೇಲ್ ಮೂಲಕ ಸಲ್ಲಿಸಬಹುದಾಗಿದೆ. ಇತರೆ ಜಿಲ್ಲೆಗಳ ಪತ್ರಕರ್ತರು ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧಿಕಾರಿಗಳಿಗೆ ಸಲ್ಲಿಸಬಹುದು ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ