ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ಜಿಲ್ಲಾಧ್ಯಕ್ಷ ಪಾಳೇಗಾರ್ ಲೋಕೇಶ್ ಮಾತನಾಡಿ ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕ ಸಮಾಜದ ಶಕ್ತಿ ಕೇಂದ್ರ ರಾಜನಹಳ್ಳಿಯ ಶ್ರೀ ಮಹರ್ಷಿ ವಾಲ್ಮೀಕಿ ಗುರುಪೀಠದಲ್ಲಿ ಫೆಬ್ರವರಿ 8 ಹಾಗೂ 9ನೇ ತಾರೀಕು ಶ್ರೀ ಮಹರ್ಷಿ ವಾಲ್ಮೀಕಿ ಸಮಾಜದ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಂಡಿದ್ದು ಮಹರ್ಷಿ ವಾಲ್ಮೀಕಿ ಜಾತ್ರೆಯಲ್ಲಿ ನಾಡಿನ ಸರ್ವ ಧರ್ಮಗಳ ಸಾಧು ಸಂತರು ಮಠಾಧೀಶರು ಮುಖ್ಯಮಂತ್ರಿಗಳು ಮಾಜಿ ಮುಖ್ಯಮಂತ್ರಿಗಳು ಸಚಿವರೂ ಮಾಜಿ ಸಚಿವರು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಅನೇಕ ಗಣ್ಯರು ಸಾಹಿತಿಗಳು ವಿವಿಧ ಗೋಷ್ಠಿ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದು ಇಂತಹ ಅದ್ಭುತ ಕಾರ್ಯಕ್ರಮಕ್ಕೆ ಪಾವಗಡ ತಾಲೂಕಿನ ವತಿಯಿಂದ ವಾಲ್ಮೀಕಿ ಸಮಾಜದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.

ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಪಾವಗಡ ತಾಲೂಕು ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಸಮಿತಿ ಅಧ್ಯಕ್ಷ ಕರವೇ ಲಕ್ಷ್ಮೀನಾರಾಯಣ ಮಾತನಾಡಿ ಪಾವಗಡ ತಾಲೂಕಿನ ವಾಲ್ಮೀಕಿ ಸಮಾಜದ ವತಿಯಿಂದ ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರೆಗೆ ಸಮುದಾಯದ ಬಂಧುಗಳು ಹೆಚ್ಚಿನ ರೀತಿಯಲ್ಲಿ ತನಮಾನ ಧನ ಸಹಾಯ ಸಹಕಾರ ನೀಡಬೇಕೆಂದು ಕೋರಿ ಜಾತ್ರೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಶಿವು ಬ್ಯಾಡನೂರು. ಮಂಜುನಾಥ್ ಗುತ್ತಿಗೆದಾರರು. ನಾಗರಾಜ್. ಶ್ರೀನಿವಾಸ್ ನಾಯಕ. ಗೌಡೇಟಿ ಮೂರ್ತಿ. ರಾಘವೇಂದ್ರ. ಗ್ರಾಪಂ ಸದಸ್ಯ ನರಸಯ್ಯ. ಮುಂತಾದವರು ಹಾಜರಿದ್ದರು.
ವರದಿ: ಶಿವಾನಂದ ಪಾವಗ ಡ

