LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ಯಾವುದೇ ಸಮಯದಲ್ಲಿ ಡಿಸಿಎಂ ಮಾಡಬಹುದು : ಸತೀಶ್ ಜಾರಕಿಹೊಳಿ

Advertisement

ಬೆಂಗಳೂರು: ವಾಲ್ಮೀಕಿ ನಿಗಮದ ಹಗರಣದ ಆರೋಪದಲ್ಲಿ ಸಿಲುಕಿರುವ ಬಿ.ನಾಗೇಂದ್ರಗೆ ಮತ್ತೆ ಸಚಿವ ಸ್ಥಾನ ಸಿಕ್ಕಿರುವುದಕ್ಕೆ ವಿಪಕ್ಷ ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪದಿಸಿದ್ದು, ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದ್ದಾರೆ. ಈ ಬೆಳವಣಿಗೆ ನಡುವೆ ನಾಗೇಂದ್ರಗೆ ಸಚಿವ ಸ್ಥಾನ ವಿಚಾರವಾಗಿ ಸಚಿವ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸತೀಶ್ ಜಾರಕಿಹೊಳಿ, ಜಾಮೀನಿನ ಮೇಲೆ ಇರುವ ನಾಗೇಂದ್ರ ಅವರಿಗೆ ಸಚಿವ ಸ್ಥಾನ ನೀಡಿರುವ ಕುರಿತು ಇದು ಹೈಕಮಾಂಡ್ ತೀರ್ಮಾನ. ಹೈಕಮಾಂಡ್ ಈ ನಿರ್ಧಾರ ಕೈಗೊಂಡಿದೆ. ಎಲ್ಲ ಹಿರಿಯರು ಚರ್ಚಿಸಿ ಇದನ್ನು ಮಾಡಿದ್ದಾರೆ ಎಂದರು.

ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ವಿಚಾರವಾಗಿ ಪಕ್ಷದಲ್ಲಿ ಇದರ ಬಗ್ಗೆ ಇನ್ನೂ ಚರ್ಚೆ ಆಗಿಲ್ಲ. ಖಾತೆ ಹಂಚಿಕೆ ಮುಗಿದ ನಂತರ ಈ ಬಗ್ಗೆ ಚರ್ಚಿಸಲಾಗುವುದು. ಇದನ್ನು ಯಾವುದೇ ಸಮಯದಲ್ಲಿ ಮಾಡಬಹುದು ಎಂದು ತಿಳಿಸಿದರು.

ಮಹಿಳಾ ಮಂತ್ರಿಗಳ ಕೊರತೆಯ ಬಗ್ಗೆ ಪ್ರತಿಕ್ರಿಯಿಸಿದ ಜಾರಕಿಹೊಳಿ, ಮಹಿಳೆಯರಿಗಾಗಿ ಒಂದು ಸ್ಥಾನ ಖಾಲಿ ಇದೆ. ಮಹಿಳಾ ಪ್ರಾತಿನಿಧ್ಯ ಇಲ್ಲದೆ ಮಂತ್ರಿಮಂಡಲ ಆಗುವುದಿಲ್ಲ. ಹೈಕಮಾಂಡ್ ಶೀಘ್ರದಲ್ಲೇ ಈ ಬಗ್ಗೆ ತೀರ್ಮಾನ ಕೈಗೊಳ್ಳಲಿದೆ ಎಂದು ಭರವಸೆ ನೀಡಿದರು.

ಇನ್ನು ಸಚಿವ ಸ್ಥಾನ ಹರಾಜಾಗಿದೆ, ಹಣ ನೀಡಲಾಗಿದೆ ಎಂಬ ಬಿಜೆಪಿ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸತೀಶ್ ಜಾರಕಿಹೊಳಿ, ಇದು ಕೇವಲ ಊಹಾಪೋಹ. ಯಾರಿಗೆ ಹಣ ನೀಡಿದ್ದಾರೆಂದು ಅವರು ಹೇಳಲಿ ಎಂದರು.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST