ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ 2023ರಲ್ಲಿ ನಡೆದ 6ರಿಂದ 8ನೇ ತರಗತಿಯ 15,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಪಟ್ಟಿಯನ್ನು ಕರ್ನಾಟಕ ಹೈಕೋರ್ಟ್ ಕಲಬುರಗಿ ಪೀಠ ರದ್ದುಪಡಿಸಿ ಆದೇಶ ನೀಡಿದ್ದು ನಿಯಮಾನುಸಾರ ಹೊಸದಾಗಿ ಪ್ರಕ್ರಿಯೆ ನಡೆಸಲು ನಿರ್ದೇಶಿಸಿದೆ.
ಶಿಕ್ಷಕರ ನೇಮಕಾತಿಯಲ್ಲಿ ಸಂವಿಧಾನದ 371ಜೆ ಅಡಿಯಲ್ಲಿ ಕಲ್ಯಾಣ ಕರ್ನಾಟಕದ ಸ್ಥಳೀಯ ಅಭ್ಯರ್ಥಿಗಳಿಗೆ ಅನ್ವಯಿಸುವ ಮೀಸಲಾತಿ ಹಾಗೂ ಎಚ್‌ಕೆ , ನಾನ್ ಎಚ್‌ಕೆ ವೃಂದಗಳ ನಿಗದಿಯಲ್ಲಿ ಗೊಂದಲ ಉಂಟಾಗಿತ್ತು.
ಇದನ್ನು ಪ್ರಶ್ನಿಸಿ ಹಲವು ಅಭ್ಯರ್ಥಿಗಳು ನ್ಯಾಯಾಲಯ ಮೊರೆ ಹೋಗಿದ್ದರು. ಹೀಗಾಗಿ ಅರ್ಜಿ ಪರಿಶೀಲನೆ ನಡೆಸಿದ ನ್ಯಾಯಾಲಯ 2023ರ ಫೆ.1ರಂದು ಡಿಪಿಆರ್‌ಹೊರಡಿಸಿದ್ದ ಸುತ್ತೋಲೆ ಹಾಗೂ 2024ರ ಜ.31ರ ಕೆಎಸ್‌ಎಟಿ ಆದೇಶವನ್ನೂ ರದ್ದುಪಡಿಸಿರುವುದಾಗಿ ಆದೇಶದಲ್ಲಿ ಉಲ್ಲೇಖೀಸಲಾಗಿದೆ.


