LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ದಸರಾ ಮೆರವಣಿಗೆ ನಿಶಾನೆ ಆನೆಯಾಗಿ 'ಕ್ಯಾಪ್ಟನ್ ಕಿಂಗ್' ಅಭಿಮನ್ಯು ಆಯ್ಕೆ

Advertisement

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಹಲವು ವರ್ಷಗಳಿಂದ ಅಂಬಾರಿ ಹೊತ್ತು ಜನಮನ ಗೆದ್ದಿದ್ದ 'ಕ್ಯಾಪ್ಟನ್ ಕಿಂಗ್' ಅಭಿಮನ್ಯುವನ್ನು ಈ ಬಾರಿ ನಿಶಾನೆ ಆನೆಯಾಗಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಆಯ್ಕೆ ಮಾಡಲಾಗಿದೆ.

60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮನ್ಯುವನ್ನು ಈ ಬಾರಿ ಅಂಬಾರಿ ಹೊರುವ ಜವಾಬ್ದಾರಿಯಿಂದ ನಿವೃತ್ತಿಗೊಳಿಸಲಾಗಿತ್ತು.

ದಸರಾ ಗಜಪಡೆಯಿಂದಲೂ ಅಭಿಮನ್ಯುವನ್ನು ಕೈಬಿಡಲಾಗಿತ್ತು. ಆದರೆ ಕೋಟ್ಯಂತರ ಅಭಿಮಾನಿಗಳ ಒತ್ತಾಸೆ ಹಾಗೂ ಭಾವನೆಗಳಿಗೆ ಮನ್ನಣೆ ನೀಡಿ, ಹಿರಿಯ ಹಾಗೂ ಅನುಭವಿ ಅಭಿಮನ್ಯುವಿಗೆ ದಸರಾ ಮೆರವಣಿಗೆಯಲ್ಲಿ ಮತ್ತೊಮ್ಮೆ ಅವಕಾಶ ನೀಡಲಾಗಿದೆ.

ಅಭಿಮನ್ಯು ಹಲವು ವರ್ಷಗಳ ಕಾಲ ಮೈಸೂರು ದಸರೆಯ ಅಂಬಾರಿ ಹೊತ್ತು ನಾಡಿನ ಜನರ ಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದಾನೆ. ಆತನ ಶಾಂತ ಸ್ವಭಾವ, ಶಿಸ್ತು, ಧೈರ್ಯ ಹಾಗೂ ನಾಯಕತ್ವದ ಗುಣಗಳಿಂದಾಗಿ 'ಕ್ಯಾಪ್ಟನ್' ಎಂದೇ ಅಭಿಮಾನಿಗಳಿಂದ ಕರೆಯಲ್ಪಡುತ್ತಾನೆ.

ಹಿರಿಯ ಆನೆಯಾಗಿ ದಸರಾ ಗಜಪಡೆಯಲ್ಲಿರುವ ಇತರ ಆನೆಗಳಿಗೆ ಮಾರ್ಗದರ್ಶನ ನೀಡುವ ಸಾಮರ್ಥ್ಯವೂ ಅಭಿಮನ್ಯುವಿಗಿದೆ. ಹೀಗಾಗಿ ನಿಶಾನೆ ಆನೆಯಾಗಿ ಅಭಿಮನ್ಯುವಿನ ಆಯ್ಕೆ ದಸರಾ ಅಭಿಮಾನಿಗಳಿಗೆ ಸಂತಸ ತಂದಿದೆ.

ಈ ಮೂಲಕ ದಸರಾ ಜಂಬೂಸವಾರಿಯಲ್ಲಿ ಕ್ಯಾಪ್ಟನ್ ಅಭಿಮನ್ಯುವನ್ನು ಮತ್ತೊಮ್ಮೆ ಕಣ್ತುಂಬಿಕೊಳ್ಳುವ ಅವಕಾಶ ಅಭಿಮಾನಿಗಳಿಗೆ ಸಿಗಲಿದೆ.

ಸತತ ಆರು ಬಾರಿ ದಸರಾ ಕ್ಯಾಪ್ಟನ್ ಆಗಿ ಚಾಮುಂಡೇಶ್ವರಿ ದೇವಿಯ ಚಿನ್ನದ ಅಂಬಾರಿಯನ್ನು ಯಶಸ್ವಿಯಾಗಿ ಹೊತ್ತಿದ್ದ ಅಭಿಮನ್ಯು, ತನ್ನ ಶಿಸ್ತು, ಧೈರ್ಯ, ಗಾಂಭೀರ್ಯ ಮತ್ತು ಕರ್ತವ್ಯನಿಷ್ಠೆಯಿಂದ ನಾಡಿನ ಜನರ ಮನ ಗೆದ್ದಿದ್ದಾನೆ.

60 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಭಿಮನ್ಯುವನ್ನು ಅಂಬಾರಿ ಹೊರುವ ಜವಾಬ್ದಾರಿಯಿಂದ ನಿವೃತ್ತಿಗೊಳಿಸಲಾಗಿತ್ತು.

2026ರ ದಸರಾ ಗಜಪಡೆಯ ಆರಂಭಿಕ ಪಟ್ಟಿಯಲ್ಲಿ ಅಭಿಮನ್ಯುವಿನ ಹೆಸರು ಇಲ್ಲದಿರುವುದು ಅಭಿಮಾನಿಗಳಲ್ಲಿ ಬೇಸರ ಮೂಡಿಸಿತ್ತು.

ಇದೀಗ ಆತನಿಗೆ ನಿಶಾನೆ ಆನೆಯ ಸ್ಥಾನ ನೀಡುವ ಮೂಲಕ ಗೌರವಪೂರ್ವಕ ವಿದಾಯ ನೀಡಲು ಮುಂದಾಗಿರುವುದು ಅಭಿಮಾನಿಗಳಿಗೆ ಸಂತಸ ತಂದಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್