ಬೆಳಗಾವಿ: ನಗರದಲ್ಲಿ ಚಲಿಸುವ ಕಾರೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದು, ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ನಡೆದಿದೆ.
ಬೆಳಗಾವಿಯ ಪ್ರಸಿದ್ಧ ರಾಮದೇವ್ ಹೋಟೆಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಕಾರು ಚಲಿಸುತ್ತಿದ್ದಾಗ ದಿಢೀರನೆ ಅದರಲ್ಲಿ ಬೆಂಕಿ ಕಾಣಿಸಿಕೊಂಡಿದೆ.
ತಕ್ಷಣವೇ ಜಾಗೃತರಾದ ಚಾಲಕ, ಕಾರನ್ನು ರಸ್ತೆ ಬದಿಗೆ ನಿಲ್ಲಿಸಿದ್ದಾರೆ. ಬೆಂಕಿ ಇಡೀ ಕಾರಿಗೆ ಆವರಿಸಿಕೊಳ್ಳುವ ಮುನ್ನವೇ ಒಳಗಿದ್ದ ಪ್ರಯಾಣಿಕರು ತಕ್ಷಣವೇ ಕೆಳಗಿಳಿದು ಓಡಿದ್ದರಿಂದ ದೊಡ್ಡ ಅನಾಹುತವೊಂದು ತಪ್ಪಿದಂತಾಗಿದೆ.
ನೋಡುನೋಡುತ್ತಿದ್ದಂತೆಯೇ ಕಾರು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ, ಕಾರಿಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.


