LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಮರಕ್ಕೆ ಕಾರು ಡಿಕ್ಕಿ : ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿನಿಯರ ಸಾವು 

Advertisement

ಬೆಂಗಳೂರು : ಅತಿವೇಗದಿಂದಾಗಿ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿನಿಯರು ಮೃತಪಟ್ಟಿರುವ ಘಟನೆ ಕುದೂರು ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿದೆ. 

ಮೃತ ವಿದ್ಯಾರ್ಥಿನಿಯರನ್ನು ನಗರದ ಸಪ್ತಗಿರಿ ಎಂಜಿನಿಯರಿಂಗ್‌ ಕಾಲೇಜಿನ ವಿದ್ಯಾರ್ಥಿನಿಯರಾದ ಜಾಹ್ನವಿ (20) ಮತ್ತು ವೈಷ್ಣವಿ (20) ಎಂದು ಗುರುತಿಸಲಾಗಿದೆ.

ಎಂಜಿನಿಯರಿಂಗ್‌ ವ್ಯಾಸಂಗ ಮಾಡುತ್ತಿದ್ದ ಜಾಹ್ನವಿ, ವೈಷ್ಣವಿ ಸೇರಿದಂತೆ ನಾಲ್ವರು ಯುವತಿಯರು ಹಾಗೂ ಇಬ್ಬರು ಯುವಕರು ಸೇರಿ ಆರು ಮಂದಿ ವಿದ್ಯಾರ್ಥಿಗಳು, ಕುಣಿಗಲ್‌ ತಾಲ್ಲೂಕಿನ ಉತ್ತರಿ ಬೆಟ್ಟದ ಬಳಿ ಪ್ರಾಜೆಕ್ಟ್‌ ವರ್ಕ್‌ ಇದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಕುಣಿಗಲ್‌ಗೆ ತೆರಳುತ್ತಿದ್ದರು.

ಇವರ ಕಾರು ಬೆಂಗಳೂರು ದಕ್ಷಿಣ ಜಿಲ್ಲೆಯ ಮಾಗಡಿ ತಾಲ್ಲೂಕಿನ ಗುಡೇಮಾರನಹಳ್ಳಿ ಹ್ಯಾಂಡ್‌ ಪೋಸ್ಟ್‌ ಬಳಿ ಇಂದು ಬೆಳಗಿನ ಜಾವ 6.45ರ ಸುಮಾರಿಗೆ ಸಂಚರಿಸುತ್ತಿದ್ದಾಗ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ವಿದ್ಯಾರ್ಥಿನಿಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನುಳಿದ ನಾಲ್ವರು ವಿದ್ಯಾರ್ಥಿಗಳ ಪೈಕಿ ಗಗನ್‌ ಮತ್ತು ಜಶ್ವಂತ್‌ ಅವರ ಸ್ಥಿತಿ ಚಿಂತಾಜನಕವಾಗಿದೆ.

ಸ್ಥಳಕ್ಕೆ ಕುದೂರು ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಒಂದು ಮೂಲದ ಪ್ರಕಾರ, ಕಾರಿನ ಟೈರ್‌ ಸ್ಫೋಟಗೊಂಡು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ.

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯ ನಂತರವಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಲಿದೆ.

ಮರಕ್ಕೆ ಡಿಕ್ಕಿ ಹೊಡೆದಿರುವ ಶಂಕೆ ವ್ಯಕ್ತವಾಗಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದು, ತನಿಖೆಯ ನಂತರವಷ್ಟೇ ಅಪಘಾತಕ್ಕೆ ನಿಖರ ಕಾರಣ ತಿಳಿದುಬರಲಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮತ್ತೆ ನಟ ಅಮಿತಾಭ್‌ ಬಚ್ಚನ್​​​​ಗೆ ಜೀವ ಬೆದರಿಕೆ!ದೇಶಾದ್ಯಂತ ನ. 26ರಂದು ರೈತ ಚಳವಳಿ, 27ರಂದು ರಸ್ತೆ ತಡೆ : ರಾಕೇಶ್ ಟಿಕಾಯತ್ ಘೋಷಣೆಸೈಬೀರಿಯಾದಿಂದ 6000 ಕಿ.ಮೀ. ಹಾರಿಬಂದ ಪುಟ್ಟ ಅತಿಥಿ : ವಿಜಯನಗರದಲ್ಲಿ ಕಂದು ಕಾಳಿಂಗ ಪ್ರತ್ಯಕ್ಷ! ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಬೆಳಗಾವಿ ಎಸಿ ಕಚೇರಿ ಎಸ್ ಡಿ ಎಭಾರತ ವಿರುದ್ಧದ ಟೆಸ್ಟ್ ಸರಣಿಗೆ ನ್ಯೂಜಿಲೆಂಡ್ ತಂಡ ಪ್ರಕಟಆಸ್ಟ್ರೇಲಿಯಾ- ಇಂಗ್ಲೆಂಡ್ ತಂಡಗಳಿಗೆ ನಾಳೆ ನಿರ್ಣಾಯಕ ಪಂದ್ಯ ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ ಆರನೇ ವಿಜ್ಞಾನ ಸಮ್ಮೇಳನ ಪೂರ್ವಭಾವಿ ಸಭೆಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯ : ಅನ್ನಮ್ಮಶ್ರೀಲಂಕಾ ತಂಡಕ್ಕೆ ಆರಂಭಿಕ ಅಘಾತ ಮರಕ್ಕೆ ಕಾರು ಡಿಕ್ಕಿ : ಇಬ್ಬರು ಎಂಜಿನಿಯರಿಂಗ್‌ ವಿದ್ಯಾರ್ಥಿನಿಯರ ಸಾವು