LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಬೆಳಗಾವಿಯಿಂದ ಬರುತ್ತಿದ ಕಾರು ಪಲ್ಟಿ : ಮೂವರು ಪ್ರಯಾಣಿಕರು ಸ್ಥಳದಲ್ಲೇ ಸಾವು 

Advertisement

ಧಾರವಾಡ: ಧಾರವಾಡ (Dharwad ) ಜಿಲ್ಲೆಯ ತಾಲೂಕಿನ ವೆಂಕಟಾಪುರ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಭೀಕರ ರಸ್ತೆ ಅಪಘಾತ (Accident ) ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಗೆ ಪಲ್ಟಿಯಾದ ಪರಿಣಾಮ ದಾವಣಗೆರೆ ಮೂಲದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ದಾವಣಗೆರೆ ಜಿಲ್ಲೆಯ ನಿವಾಸಿಗಳಾದ ವಿನಾಯಕ ಕೆ. ಯು. (25), ಮಂಜುನಾಥ (29) ಹಾಗೂ ಬಸವರಾಜ (34) ಮೃತಪಟ್ಟ ದುರದೃಷ್ಟಕರ ವ್ಯಕ್ತಿಗಳು. ಬೆಳಗಾವಿಯಿಂದ ಧಾರವಾಡ ಕಡೆಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಪಲ್ಟಿಯಾಗಿದೆ

ಬೆಳಗಾವಿಯಿಂದ ಧಾರವಾಡದತ್ತ ವೇಗವಾಗಿ ಆಗಮಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ. ಕಾರಿನಲ್ಲಿ ಒಟ್ಟು ಆರು ಜನರಿದ್ದು, ಅಪಘಾತದ ಭೀಕರತೆಗೆ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಮೃತರ ಗುರುತನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.

ಈ ಭೀಕರ ಘಟನೆಯಲ್ಲಿ ಕಾರಿನಲ್ಲಿದ್ದ ಮತ್ತೂ ಮೂವರು ತೀವ್ರವಾಗಿ ಗಾಯಗೊಂಡಿದ್ದಾರೆ. ಅಪಘಾತ ಸಂಭವಿಸಿದ ತಕ್ಷಣವೇ ಸ್ಥಳೀಯರ ನೆರವಿನಿಂದ ಗಾಯಾಳುಗಳನ್ನು ಧಾರವಾಡದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ತುರ್ತು ಚಿಕಿತ್ಸೆ ನೀಡಲಾಗುತ್ತಿದೆ.

ವಿಷಯ ತಿಳಿದ ತಕ್ಷಣವೇ ಗರಗ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಅಪಘಾತದ ಕುರಿತು ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಹಿಳಾ ಏಸಿಯಾ ಕಪ್: ನಾಳೆ ಭಾರತ-ಪಾಕ್ ಪಂದ್ಯ ಸೆ. 9 ರಂದು ಪಾಕಿಸ್ತಾನ- ಇಂಗ್ಲೆಂಡ್ ತೃತೀಯ ಟೆಸ್ಟ್ ಶೀಘ್ರದಲ್ಲೇ ಬರಪೀಡಿತ ತಾಲೂಕುಗಳ 2ನೇ ಪಟ್ಟಿ ಘೋಷಣೆ: ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಬಸ್ ಟಿಕೆಟ್ ದರ ಏರಿಕೆ: ಸಚಿವ ಬೈರತಿ ಸುರೇಶ್ ಸುಳಿವು ಚೊಕ್ಕಸಂದ್ರದ ಶ್ರೀ ಕೃಷ್ಣ ದೇವಸ್ಥಾನದಲ್ಲಿ ವಿಶೇಷ ಪೂಜೆ, ದೇವರ ದರ್ಶನ ಪಡೆದ ನಾಗರಾಜ್ ಯಾದವ್ ದಂಪತಿಅಬ್ಬಿಗೆರೆಯಲ್ಲಿ ಶ್ರೀ ಕೃಷ್ಣ ಯಾದವ ಸೇವಾ ಸಮಿತಿ ವತಿಯಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಗೃಹಲಕ್ಷ್ಮಿ ಬಡಾವಣೆಯಲ್ಲಿ ವಿವಿಧ ರಸ್ತೆ ಡಾಂಬರೀಕರಣ ಕಾಮಗಾರಿಗೆ ಚಾಲನೆ:  ಶಾಸಕ ಎಸ್ ಮುನಿರಾಜುಕಿರಿಯ ಕ್ರಿಕೆಟ್ ಅಟಗಾರ್ ರೋಹಿತ್ ಯಾದವ್ ಗೆ 2 ವರ್ಷ ನಿಷೇಧ ಹೇರಿದ ಬಿಸಿಸಿಐ ಬರಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಸಿಎಂ ಡಿ ಕೆ ಶಿವಕುಮಾರದೌರ್ಜನ್ಯ ವಿರೋಧಿ ಸಂಘಟನೆಗಳ ಒಕ್ಕೂಟದಿಂದ ಸಮಾಜ ಕಲ್ಯಾಣ ಸಚಿವರಿಗೆ ಮನವಿ