ಬೆಂಗಳೂರು: ಕನ್ನಡಪರ ಹೋರಾಟಗಾರರ ವಿರುದ್ಧ ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಕೋಣನಕುಂಟೆ ಸಮೀಪ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ವತಿಯಿಂದ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.
ಹೋರಾಟಗಾರರ ಮೇಲಿರುವ ಕೇಸ್‌ಗಳ ಪಟ್ಟಿಯನ್ನು ನೀಡಿದರೆ, ಗೃಹ ಸಚಿವರೊಂದಿಗೆ ಚರ್ಚಿಸಿ ವಾಪಸ್ ಪಡೆಯುವುದಾಗಿ ತಿಳಿಸಿದ ಅವರು, "ಹೋರಾಟದ ಹಿನ್ನೆಲೆಯಲ್ಲಿ ದಾಖಲಾದ ಕೇಸ್‌ಗಳನ್ನು ಮಾತ್ರ ವಾಪಸ್ ಪಡೆಯಲಾಗುವುದು; ದರೋಡೆ ರೀತಿಯ ಗಂಭೀರ ಪ್ರಕರಣಗಳನ್ನು ವಾಪಸ್ ಪಡೆಯಲು ಸಾಧ್ಯವಿಲ್ಲ. ಉಳಿದೆಲ್ಲ ಕೇಸ್‌ಗಳನ್ನು ವಾಪಸ್ ಪಡೆಯುತ್ತೇವೆ, ಆದರೆ ಇನ್ಮುಂದೆ ಯಾರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು" ಎಂದು ಎಚ್ಚರಿಕೆ ನೀಡಿದರು.


