Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿ ದೋಷಪೂರಿತ ವರದಿಯಾಗಿದೆ, ಲಿಂಗಾಯತರಿಗೆ ಅನ್ಯಾಯವಾಗಿದೆ : ತೋಂಟದಾರ್ಯ ಶ್ರೀ

Advertisement
ಗದಗ : ಸರ್ಕಾರದ ಜಾತಿಗಣತಿ ವರದಿ ಕರುನಾಡಲ್ಲಿ ಹೊಸ ರಾಜಕೀಯ ಕಿಚ್ಚನ್ನು ಹೊತ್ತಿಸಿದೆ. ಸಿಎಂ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಸ್ವಪಕ್ಷದವರು ಸೇರಿದಂತೆ ಅನೇಕರು ಬೆಂಕಿ ಉಗುಳುತ್ತಿದ್ದಾರೆ.

ಇದೀಗ ಗದಗದ ತೋಂಟದಾರ್ಯ ಮಠದ ಪೀಠಾಧಿಪತಿ ಡಾ. ಸಿದ್ದರಾಮ ಶ್ರೀಗಳು ಅಸಮಾಧಾನ ಹೊರಹಾಕಿದ್ದಾರೆ. ಜಾತಿಗಣತಿ ದೋಷಪೂರಿತ ವರದಿಯಾಗಿದೆ.ವರದಿಯಲ್ಲಿ ಲಿಂಗಾಯತರಿಗೆ ಅನ್ಯಾಯವಾಗಿದೆ ಎಂದು ಟೀಕಿಸಿದ್ದಾರೆ.

ಕರ್ನಾಟಕದಲ್ಲಿ ಲಿಂಗಾಯತರು ಬಹುಸಂಖ್ಯಾತರೆಂಬುದು ಎಲ್ಲರಿಗೂ ತಿಳಿದಿದೆ. ನಂತರ ಒಕ್ಕಲಿಗರು ಸೇರಿದಂತೆ ವಿವಿಧ ಜಾತಿಯವರು ಮುಂಚೂಣಿಯಲ್ಲಿದ್ದಾರೆ. ಆದರೆ, ಲಿಂಗಾಯತರ ಜನಸಂಖ್ಯೆ ಗಣನೀಯವಾಗಿ ಕಡಿಮೆ ಆಗಿದೆ.

ಲಿಂಗಾಯತರು ಮೀಸಲಾತಿಗಾಗಿ ಉಪಜಾತಿಯ ಹೆಸರನ್ನು ಬರೆಸಿರುವ ಕಾರಣ ಇರಬಹುದು. ದೋಷಪೂರಿತ ವರದಿಯನ್ನ ಸರ್ಕಾರ ಒಪ್ಪಿಕೊಳ್ಳುವುದರಿಂದ ಅನೇಕರಿಗೆ ಅನ್ಯಾಯವಾಗಬಹುದು ಎಂದಿದ್ದಾರೆ.

ಸರ್ಕಾರ ಇನ್ನೊಮ್ಮೆ ಸಮೀಕ್ಷೆ ನಡೆಸಬೇಕು. ಮತ್ತೊಮ್ಮೆ ಜಾತಿಗಣತಿ ವರದಿ ಸಿದ್ಧಪಡಿಸಬೇಕು ಎಂದು ಸ್ವಾಮೀಜಿ ಒತ್ತಾಯಿಸಿದರು. ಜಾತಿಗಣತಿಯ ವರದಿ ಸಾರ್ವಜನಿಕರಲ್ಲಿ ಸಂಶಯ ಹುಟ್ಟುಹಾಕಿದೆ.

ಸುಮಾರು ಏಳೆಂಟು ವರ್ಷಗಳ ಹಿಂದೆ ಜಾತಿಗಣತಿ ಸಿದ್ಧಪಡಿಸಿದ್ದಾರೆ. ಆ ಜಾತಿ ಜನಗಣತಿ ವರದಿ ಸಮರ್ಪಕವಾಗಿ ಇಲ್ಲ. ಆ ವರದಿಯನ್ನ ಸಿದ್ಧಪಡಿಸಿದ ವ್ಯಕ್ತಿಗಳು ಕರ್ನಾಟಕ ಪ್ರತಿಯೊಬ್ಬ ವ್ಯಕ್ತಿಯನ್ನು ಸಂಪರ್ಕಿಸಿಲ್ಲವೆಂಬ ಆರೋಪವಿದೆ ಎಂದು ಹಳಿದ್ದಾರೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ