Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಜಾತಿಗಣತಿಗೆ ಹೆಚ್ಚಿನ ಕಾಲಾವಕಾಶ ಬೇಕು: ಹನಮಂತ ಅಲ್ಕೋಡ್

Advertisement
ಬೆಳಗಾವಿ: ರಾಜ್ಯಾದ್ಯಂತ ನಡೆಯುತ್ತಿರುವ ಜಾತಿ ಸಮೀಕ್ಷೆಗೆ ಸಂಬಂಧಿಸಿದಂತೆ ದತ್ತಾಂಶವನ್ನು ಸಮರ್ಪಕವಾಗಿ ಪಡೆಯಲು ಹಾಗೂ ಜಾತಿ ಗಣತಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ರಾಜ್ಯ ಸರಕಾರ ಇನ್ನು ಹೆಚ್ಚಿನ ಕಾಲಾವಕಾಶ ನೀಡಬೇಕೆಂದು ಮಾದಿಗ ಸಮಾಜದ ರಾಜ್ಯಾಧ್ಯಕ್ಷ ಹನಮಂತ ಅಲ್ಕೋಡ್ ರಾಜ್ಯ ಸರಕಾರವನ್ನು ಒತ್ತಾಯಿಸಿದರು.

https://youtu.be/MxzGnSpJba0

ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ಒತ್ತಾಯ ಮಾಡಿದ ಅವರು ಸದನದಲ್ಲಿ ಜಾತಿ ಗಣತಿ ಕುರಿತು ಮಾತನಾಡುವಾಗ ದತ್ತಾಂಶ ಬಂದಿಲ್ಲ ಎಂದು ಹೇಳುವ ಸರಕಾರ, ಒಳ ಮೀಸಲಾತಿ ಸಂಬಂಧ ಹೇಗೆ ನಿರ್ಧಾರ ಕೈಗೊಳ್ಳುತ್ತದೆ. ಜಾತಿ ಗಣತಿ ಪರಿಪೂರ್ಣವಾಗಬೇಕೆಂದರೆ ಹದಿನೈದು ದಿನ ಸಾಲುವುದಿಲ್ಲ. ಇದಕ್ಕೆ ಹೆಚ್ಚಿನ ಕಾಲಾವಕಾಶ ಬೇಕು. ಒಂದೊಂದು ಮನೆಯಲ್ಲಿ ಅಧಿಕಾರಿಗಳು ಎರಡೆರಡು ಗಂಟೆ ತೆಗೆದುಕೊಳ್ಳುತ್ತಿದ್ದಾರೆ ಅಂದ ಮಾತ್ರಕ್ಕೆ ಬರೀ ಹದಿನೈದು ದಿನಗಳಲ್ಲಿ ಹೇಗೆ ಜಾತಿ ಗಣತಿ ಪರಿಪೂರ್ಣವಾಗುತ್ತದೆ ಎಂದು ಪ್ರಶ್ನಿಸಿದರು.

ಜಾತಿ ಗಣತಿ ಸಂದರ್ಭದಲ್ಲಿ ಜನರ ದಿಕ್ಕು ತಪ್ಪಿಸುವ ಕೆಲಸಗಳು ಆದರೆ ಅಂತವರ ವಿರುದ್ಧ ಸೂಕ್ತ ಕ್ರಮವಾಗಬೇಕೆಂದು ಒತ್ತಾಯಿಸಿದ ಅವರು ತಮ್ಮ ಸಮುದಾಯದ ಜನರು ಧರ್ಮ ಹಾಗೂ ಜಾತಿ ಎರಡೂ ಕಾಲಂಗಳಲ್ಲಿ ಮಾದಿಗ ಎಂದು ನಮೂದಿಸಬೇಕೆಂದು ಮನವಿ ಮಾಡಿಕೊಂಡರು.  ಮಾದಿಗ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ಕಡಿಮೆಯಾಗಿರುವ ಕುರಿತು ಆತಂಕ ವ್ಯಕ್ತಪಡಿಸಿರುವ ಅವರು ನಮ್ಮ ಸಮಾಜದಲ್ಲಿ  ಕೇವಲ ಏಳು ಜನ ಶಾಸಕರು ಇದ್ದಾರೆ. ಮುಂಬರುವ ದಿನಗಳಲ್ಲಿ ನಮ್ಮ ಸಮಾಜಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಚುನಾವಣೆ ಸ್ಪರ್ಧಿಸಲು ಅವಕಾಶ ದೊರೆಯಬೇಕೆಂದು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಾಜದ ಮುಖಂಡರಾದ ಸುನೀತಾ ಐಹೋಳೆ, ಸುರೇಶ ಐಹೋಳೆ, ಡಾ. ಎನ್. ಪ್ರಶಾಂತರಾವ್, ಅಶೋಕ ದೊಡಮನಿ,  ರಮೇಶ ರಾಯಪ್ಪಗೊಳ, ಅನಂತ ಬ್ಯಾಕೋಡ, ಮಹೇಶ ಐಹೋಳೆ ಇತರರಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ