ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಬಿಗ್ ಅಪ್‌ಡೇಟ್ ಹೊರಬಿದ್ದಿದೆ.
ಕೆಪಿಎಸ್‌ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಹಾಗೂ ಕೆಪಿಎಸ್‌ಸಿ ಸದಸ್ಯೆ ಗೀತಾ ಅವರನ್ನು ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಂಧಿಸಿದ್ದು, ನ್ಯಾಯಾಲಯವು ಇಬ್ಬರೂ ಆರೋಪಿಗಳನ್ನು ಇಂದು ಮಧ್ಯಾಹ್ನ 3:00 ಗಂಟೆಯವರೆಗೆ ಇಡಿ ವಶಕ್ಕೆ ನೀಡಿ ಆದೇಶಿಸಿದೆ.
ಬಂಧಿತರಿಬ್ಬರನ್ನೂ ಇಡಿ ಅಧಿಕಾರಿಗಳು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದು, ಪ್ರಕರಣದ ತನಿಖೆ ಮತ್ತು ಹೆಚ್ಚಿನ ವಿಚಾರಣೆಗಾಗಿ 14 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿದ್ದರು.
ವಿಚಾರಣೆ ನಡೆಸಿದ ಬೆಂಗಳೂರಿನ 4ನೇ ಸಿಸಿಎಚ್ (CCH) ಕೋರ್ಟ್ ನ್ಯಾಯಾಧೀಶರಾದ ಮಂಜುನಾಥ್ ಅವರು ಸದ್ಯ ಇಬ್ಬರನ್ನೂ ಇಂದು ಮಧ್ಯಾಹ್ನ 3 ಗಂಟೆಯವರೆಗೆ ಇಡಿ ಕಸ್ಟಡಿಗೆೊಪ್ಪಿಸಿ ಆದೇಶ ಹೊರಡಿಸಿದ್ದಾರೆ.


