ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಹೆಚ್ಚುತ್ತಿರುವ ವಿವಾದ ಮತ್ತು ಪ್ರತಿಭಟನೆಗಳ ನಡುವೆ, ಭಾರತೀಯ ಮೈತ್ರಿಕೂಟದ (INDIA bloc) 10 ಸದಸ್ಯರ ನಿಯೋಗವು ಶುಕ್ರವಾರ ರಾತ್ರಿ 8 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದೆ ಎಂದು ಮೂಲಗಳು ತಿಳಿಸಿವೆ.
ಚುನಾವಣಾ ಆಯೋಗದ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತ್ತು ಜವಾಬ್ದಾರಿಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ವಿರೋಧ ಪಕ್ಷಗಳು, ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲು ಸಿದ್ಧತೆ ನಡೆಸಿವೆ.
ಈ ನಿಯೋಗದಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಸೇರಿದಂತೆ ಹಲವು ಪ್ರಮುಖ ವಿಪಕ್ಷ ನಾಯಕರು ಭಾಗವಹಿಸುವ ನಿರೀಕ್ಷೆಯಿದೆ.


