
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಮುಖ್ಯಶಿಕ್ಷಕರಾದ ಎನ್.ಆರ್. ಠಕ್ಕಾಯಿ ಮಾತನಾಡಿ ಮಕ್ಕಳು ಉತ್ತಮ ಶಿಕ್ಷಣ ಪಡೆದು ಶ್ರೇಷ್ಠ ಸಾಧನೆ ಮಾಡಿ ದೇಶದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಬೇಕು ಎಂದರು. ತಮ್ಮ ಜೀವದ ಹಂಗು ತೊರೆದು ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮಹನೀಯರನ್ನು ಸದಾ ಸ್ಮರಿಸಬೇಕು ಎಂದು ಅವರು ಹೇಳಿದರು. ಎಸ್.ಡಿ.ಎಂ.ಸಿ ಸದಸ್ಯರಾದ ರಾಮಲಿಂಗಪ್ಪ ಮೆಕ್ಕೇದ ಮಾತನಾಡಿ ನಮ್ಮ ದೇಶದ ಬಗ್ಗೆ ನಮಗೆಲ್ಲ ಅಪಾರ ಅಭಿಮಾನ, ಹೆಮ್ಮೆ ಇರಬೇಕು ಎಂದರು. ಪರಶುರಾಮ ಅಳಗೋಡಿ ಮಾತನಾಡಿ ಅನೇಕ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ಸ್ವಾತಂತ್ರ್ಯ ಲಭಿಸಿದೆ ಎಂದು ಅಭಿಪ್ರಾಯಪಟ್ಟರು.ಭಾಷಣ ಹಾಗೂ ದೇಶಭಕ್ತಿ ಗೀತೆಗಳ ಮೂಲಕ ವಿದ್ಯಾರ್ಥಿಗಳು ಭವ್ಯ ಭಾರತದ ಹಿರಿಮೆಯನ್ನು ಕೊಂಡಾಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ವಿನಾಯಕ ಬಡಿಗೇರ, ಉಪಾಧ್ಯಕ್ಷ ರಮೇಶ ಸೂರ್ಯವಂಶಿ, ಪದಾಧಿಕಾರಿಗಳಾದ ವಿಠ್ಠಲ ಕಂಬಳಿ, ನಾಗಪ್ಪ ಬೂದಿಹಾಳ, ಯಲ್ಲಪ್ಪ ಕುರಿ, ಮಾಜಿ ತಾ.ಪಂ.ಸದಸ್ಯರಾದ ಜನಕರಾಜ ಪಾಟೀಲ, ಗ್ರಾಮಸ್ಥರಾದ ತಾನಾಜಿ ಸೂರ್ಯವಂಶಿ, ಮಲ್ಲಿಕಾರ್ಜುನ ಜೇಡರ, ಶಿಕ್ಷಕರಾದ ಜಗದೀಶ ನರಿ, ಪ್ರವೀಣ ಗುರುನಗೌಡರ, ಶಿವಾನಂದ ಬಳಿಗಾರ, ಹೇಮಲತಾ ಪುರಾಣಿಕ, ವೀರೇಂದ್ರ ಪಾಟೀಲ, ಮಂಜುಳಾ ಕಾಳಿ, ಸಂತೋಷ ಸಾಳುಂಕೆ, ಜ್ಯೋತಿ ಅಳಗೋಡಿ, ಗಂಗವ್ವ ಅಳಗೋಡಿ, ಮಹಾದೇವಿ ಸೊಗಲದ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರು, ಎಸ್.ಡಿ.ಎಂ.ಸಿ ಪದಾಧಿಕಾರಿಗಳು, ಗ್ರಾಮದ ಹಿರಿಯರು, ಹಳೆಯ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಸಾನಿಕಾ ಕುಲಕರ್ಣಿ ನಿರೂಪಿಸಿದರು. ಭಾಗ್ಯಶ್ರೀ ಬಡಿಗೇರ ಸ್ವಾಗತಿಸಿದರು. ಶ್ರೇಯಾ ಸೂರ್ಯವಂಶಿ ವಂದಿಸಿದರು.
ವರದಿ: ದುಂಡಪ್ಪ ಹೂಲಿ

