Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಲೂಕಾಡಳಿತದಿಂದ ವಿಶ್ವಕರ್ಮ ಜಯಂತ್ಯೋತ್ಸವ ಆಚರಣೆ.

Advertisement
ಸಿರುಗುಪ್ಪ :- ನಗರದ ದೇಶನೂರು ರಸ್ತೆಯಲ್ಲಿರುವ ಶ್ರೀ ಕಾಳಿಕಾ ಕಮಠೇಶ್ವರ ದೇವಸ್ಥಾನದಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ, ತಾಲೂಕಾಡಳಿತ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಸಹಯೋಗದಲ್ಲಿ ನಡೆದ ಶ್ರೀ ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ತಹಶೀಲ್ದಾರ್ ಹೆಚ್.ವಿಶ್ವನಾಥ ಅವರು ಉದ್ಘಾಟಿಸಿದರು.



ನಂತರ ಮಾತನಾಡಿ ಕಥಾ ಪುರಾಣಗಳಲ್ಲಿ ತಿಳಿದು ಬಂದಂತೆ ಪಂಚ ಕರ್ಮಯೋಗಿಯಾಗಿದ್ದಾರೆ.ಎಲ್ಲಾ ಜನಾಂಗದವರ ಮನೆಗಳಿಗೆ ಬೇಕಾದ ಬಾಗಿಲು, ಕಿಟಕಿ, ಇನ್ನಿತರ ಪೀಠೋಪಕರಣಗಳನ್ನು ಪೂರೈಸುವ ಸಮುದಾಯದ ಕುಲದೇವರಾಗಿದ್ದು, ನಾವೆಲ್ಲಾ ಅವರ ತತ್ವಾದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ತಿಳಿಸಿದರು.

ಕಾಂಗ್ರೇಸ್ ಪಕ್ಷದ ಹಿರಿಯ ಮುಖಂಡ ಬಿ.ಎಮ್.ಸತೀಶ್ ಅವರು ಮಾತನಾಡಿ ಅಂದಿನ ಕಾಲದಲ್ಲಿ ಎಲ್ಲಾ ಜನಾಂಗದವರು ಸಮಾಜದಲ್ಲಿನ ಅವಶ್ಯಕತೆಗಳನ್ನು ಪೂರೈಸುವ ತಮ್ಮ ವೃತ್ತಿಗಳಿಂದ ಬಿಂಬಿಸಿಕೊಂಡಿದ್ದರೂ ಸಹ ಶಾಂತಿ ಸಹಭಾಳ್ವೆಗೆ ಹೆಸರುವಾಸಿಯಾಗಿದ್ದರು.



ನಾವು ಸಹ ಇಂದಿನ ನಮ್ಮ ಜೀವನದಲ್ಲಿ ಹಿರಿಯರ ಮಾರ್ಗದರ್ಶನದಲ್ಲಿ ನಡೆದುಕೊಂಡು ಹೋಗುವುದರೊಂದಿಗೆ ಶಾಂತಿ ಸಾಮರಸ್ಯದಿಂದ ಬಾಳೋಣವೆಂದು ತಿಳಿಸಿದರು.ರಾಜಬೀದಿಯಲ್ಲಿ ಶ್ರೀ ವಿಶ್ವಕರ್ಮ ಅವರ ಬೃಹತ್ ಭಾವಚಿತ್ರದ ಮೆರವಣಿಗೆ ನಡೆಯಿತು.

ಇದೇ ವೇಳೆ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಪವನ್‌ಕುಮಾರ್.ಎಸ್.ದಂಡಪ್ಪನವರ್, ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎ.ಗಾದಿಲಿಂಗಪ್ಪ, ನಗರಸಭೆ ಆಯುಕ್ತ ಹೆಚ್.ಎನ್.ಗುರುಪ್ರಸಾದ್, ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ, ಉಪಾಧ್ಯಕ್ಷೆ ಯಶೋದಾ ಮೂರ್ತಿ, ಹಾಗೂ ಮುಖಂಡರಾದ ವೆಂಕಟರಾಮರೆಡ್ಡಿ, ಬಿ.ವೆಂಕಟೇಶ, ಸಮಾಜದ ಹಿರಿಯ ಮುಖಂಡರು ಹಾಜರಿದ್ದರು.

ವರದಿ :- ಶ್ರೀನಿವಾಸ ನಾಯ್ಕ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ