Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಸಂಭ್ರಮದ ಕ್ರೀಡಾ ಹಬ್ಬ

Advertisement
ಬೈಲಹೊಂಗಲ: ತಾಲೂಕಿನ ಬೂದಿಹಾಳ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ ಸನ್ 2025-26 ನೇ ಸಾಲಿನ ಕ್ರೀಡಾ ಹಬ್ಬ ಜರುಗಿತು. ಕ್ರೀಡಾ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಮುಖ್ಯಶಿಕ್ಷಕ ಎನ್.ಆರ್.ಠಕ್ಕಾಯಿ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಬಹಳ ಸಹಕಾರಿಯಾಗಿವೆ ಎಂದರು. ಸೋಲು ಗೆಲುವು ಎರಡನ್ನೂ ಮಕ್ಕಳು ಸಮಾನವಾಗಿ ಸ್ವೀಕರಿಸುವ ಹಾಗೂ ಆಟಗಳಲ್ಲಿ ಉತ್ಸಾಹದಿಂದ ಭಾಗವಹಿಸುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು. ಕ್ರೀಡಾ ಸಾಧಕರ ಬದುಕು ಎಲ್ಲರಿಗೂ ಪ್ರೇರಣೆಯಾಗಲಿ ಎಂದು ಅವರು ಹೇಳಿದರು.


ದೈಹಿಕ ಶಿಕ್ಷಣ ಶಿಕ್ಷಕರಾದ ಪಿ.ಎಸ್.ಗುರುನಗೌಡರ ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ವಿನಾಯಕ ಬಡಿಗೇರ ಕ್ರೀಡಾ ಹಬ್ಬ ಉದ್ಘಾಟಿಸಿದರು. ಉಪಾಧ್ಯಕ್ಷರಾದ ರಮೇಶ ಸೂರ್ಯವಂಶಿ ಕ್ರೀಡಾ ಜ್ಯೋತಿಯನ್ನು ಸ್ವೀಕಾರ ಮಾಡಿದರು. ಮುಖ್ಯ ಅತಿಥಿಗಳಾಗಿ ಅಗಮಿಸಿದ ಎಸ್.ಡಿ.ಎಂ.ಸಿ ಪದಾಧಿಕಾರಿಗಳಾದ ರಾಮಲಿಂಗಪ್ಪ ಮೆಕ್ಕೇದ, ದುಂಡಪ್ಪ ಮಡಿವಾಳರ ಗುಂಡು ಎಸೆಯುವುದರ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.



ಕಾರ್ಯಕ್ರಮದಲ್ಲಿ ಶಿಕ್ಷಕರಾದ ಜೆ.ಆರ್‌.ನರಿ, ಎಸ್.ವಿ. ಬಳಿಗಾರ, ಎಚ್.ವಿ.ಪುರಾಣಿಕ, ಸಂತೋಷ ಸಾಳುಂಕೆ, ಎಂ. ಎನ್. ಕಾಳೆ, ವಿ.ಬಿ. ಪಾಟೀಲ, ಶಾಲಾ ಕ್ರೀಡಾ ಮಂತ್ರಿಯಾದ ಮುತ್ತುರಾಜ ಜೋಗಿಗುಡ್ಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚೇತನಾ ಗಡಾದ ಸ್ವಾಗತಿಸಿದರು. ಮೂಗಪ್ಪ ನಾಗಣ್ಣವರ ಪ್ರಾರ್ಥಿಸಿದರು. ಶ್ರದ್ದಾ ಹೊಂಗಲ ನಿರೂಪಿಸಿದರು. ಪಲ್ಲವಿ ಸೂರ್ಯವಂಶಿ ವಂದಿಸಿದರು.

ವರದಿ: ದುಂಡಪ್ಪ ಹೂಲಿ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ